ಮುಂಬೈ: ಕಾರು ಅಪಘಾತದಲ್ಲಿ ಮೃತಪಟ್ಟಿರುವ ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮತ್ತು ಸಹ ಪ್ರಯಾಣಿಕ ಸೀಟ್ ಬೆಲ್ಟ್ ಧರಿಸಿರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅತಿ ವೇಗದ ಚಾಲನೆ ಮತ್ತು ಚಾಲಕಿಯ ತಪ್ಪು ನಿರ್ಧಾರ ಅಪಘಾತಕ್ಕೆ ಕಾರಣವಾಗಿದೆ ಎಂದೂ ಹೇಳಿದ್ದಾರೆ.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಚರೋತಿ ಚೆಕ್‌ಪೋಸ್ಟ್ ದಾಟಿದ ಬಳಿಕ ಮಿಸ್ತ್ರಿ ಅವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು 20 ಕಿ.ಮೀ. ದೂರವನ್ನು ಕೇವಲ 9 ನಿಮಿಷಗಳಲ್ಲಿ ಕ್ರಮಿಸಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ, ಪಾಲ್ಘರ್ ಜಿಲ್ಲೆಯ ಬಳಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಿಸ್ತ್ರಿ ಹಾಗೂ ಸಹ ಪ್ರಯಾಣಿಕ ಜಹಂಗೀರ್ ಪಾಂಡೋಲೆ ಭಾನುವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮುಂಬೈನ ಸ್ತ್ರೀರೋಗತಜ್ಞೆ ಅನಾಹಿತಾ ಪಾಂಡೋಲೆ ಅವರು ಕಾರನ್ನು ಚಲಾಯಿಸುತ್ತಿದ್ದರು.
ಮುಂಬೈನ ಜೆ.ಜೆ. ಆಸ್ಪತ್ರೆಯಲ್ಲಿ ಮಿಸ್ತ್ರಿ ಹಾಗೂ ಜಹಂಗೀರ್ ಅವರ ಶವ ಪರೀಕ್ಷೆ ಸೋಮವಾರ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಅನಾಹಿತಾ ಪಾಂಡೋಲೆ ಅವರನ್ನು ಶಸ್ತ್ರಕ್ರಿಯೆಗೆ ಒಳಪಡಿಸಲಾಗುವುದು ಎಂದು ಸರ್ ಎಚ್.ಎನ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಅನಾಹಿತಾ ಅವರ ಪತಿ ಡೇರಿಯಸ್ ಪಾಂಡೋಲೆ ಅವರನ್ನೂ ಇದೇ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.
ಅಂತ್ಯಕ್ರಿಯೆ:ಸೈರಸ್ ಮಿಸ್ತ್ರಿ ಅವರ ಅಂತ್ಯಕ್ರಿಯೆ ಮಂಗಳವಾರವರ್ಲಿಯ ಚಿತಾಗಾರದಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.