ADVERTISEMENT

ಕೇಂದ್ರ ನೌಕರರ ತುಟ್ಟಿಭತ್ಯೆ ಶೇ 4ರಷ್ಟು ಹೆಚ್ಚಳ ಸಾಧ್ಯತೆ

ಪಿಟಿಐ
Published 5 ಫೆಬ್ರುವರಿ 2023, 13:00 IST
Last Updated 5 ಫೆಬ್ರುವರಿ 2023, 13:00 IST
.
.   

ನವದೆಹಲಿ: ಕೇಂದ್ರ ಸರ್ಕಾರವು ತನ್ನ ಒಂದು ಕೋಟಿಗೂ ಅಧಿಕ ನೌಕರರ ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು(ಡಿ.ಎ)ಶೇ 4ರಷ್ಟು ಹೆಚ್ಚಿಸುವ ಸಾಧ್ಯತೆ ಇದೆ. ಇದರಿಂದ ಸದ್ಯ ಅಸ್ತಿತ್ವದಲ್ಲಿರುವ ಶೇ 38ರಿಂದ ಶೇ42ಕ್ಕೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಕಾರ್ಮಿಕ ಸಚಿವಾಲಯವು ಪ್ರಕಟಿಸುವ ಕೈಗಾರಿಕಾ ಕಾರ್ಮಿಕರಿಗಾಗಿ ಗ್ರಾಹಕರ ದರ ಸೂಚ್ಯಂಕ (ಸಿಪಿಐ–ಐಡಬ್ಲ್ಯು) ಆಧರಿಸಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ಪ್ರಮಾಣ ಪರಿಷ್ಕರಿಸಲಾಗಿದೆ.

ಜ.1, 2023ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ಏರಿಕೆಯಾಗಲಿದೆ. ಕಳೆದ ಬಾರಿ ಜುಲೈ 1,2022ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ಏರಿಕೆಯಾಗಿತ್ತು. ಸುಮಾರು ಒಂದು ಕೋಟಿ ಸಿಬ್ಬಂದಿಗೆ ಅನುಕೂಲವಾಗಲಿದೆ.

ADVERTISEMENT

ಈ ಹಿಂದೆ 2022ರ ಸೆಪ್ಟೆಂಬರ್‌ 28 ರಂದು ತುಟ್ಟಿಭತ್ಯೆಯನ್ನು ಪರಿಷ್ಕರಿಸಲಾಗಿತ್ತು. ಅದು 2022ರ ಜುಲೈ 1ರಿಂದ ಜಾರಿಗೆ ಬಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.