ADVERTISEMENT

ಮಧ್ಯಪ್ರದೇಶ | ದಲಿತ ವ್ಯಕ್ತಿಗೆ ಚಪ್ಪಲಿ ಹಾರ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2024, 13:12 IST
Last Updated 2 ಅಕ್ಟೋಬರ್ 2024, 13:12 IST
<div class="paragraphs"><p>ಬಂಧನ</p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಮಂದಸೌರ್‌: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದಲಿತ ವ್ಯಕ್ತಿಯ ಮುಖಕ್ಕೆ ಮಸಿ ಬಳಿದು, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಘಟನೆ ಮಧ್ಯಪ್ರದೇಶದ ಮಂದಸೌರ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದರು.

ADVERTISEMENT

ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭಿಸಿದ ನಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ  (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಇಬ್ಬರನ್ನು ಬಂಧಿಸಲಾಗಿದೆ ಎಂದು ಬುಧವಾರ ಹೇಳಿದರು.

ಕಳೆದ ವಾರ ಭೈಸೋದಾಮಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಅಭಿಷೇಕ್‌ ಆನಂದ್‌ ತಿಳಿಸಿದರು.

ವಿಡಿಯೊದಲ್ಲಿ, ಅರೆನಗ್ನರಾಗಿದ್ದ ವ್ಯಕ್ತಿಯ ಮುಖಕ್ಕೆ ಮಸಿ ಬಳಿದು ಮತ್ತು ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ನಡೆಸಿದ ದೃಶ್ಯವಿದೆ.

ಇದಕ್ಕೂ ಮುನ್ನ ಸೆಪ್ಟೆಂಬರ್‌ 29ರಂದು ಮಹಿಳೆಯೊಬ್ಬರು ದಲಿತ ವ್ಯಕ್ತಿ ವಿರುದ್ಧ ನೀಡಿದ್ದ ದೂರಿನ ಆಧಾರದಲ್ಲಿ ಎಫ್‌ಐಆರ್‌ ದಾಖಲಾಗಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.