ADVERTISEMENT

ಅರುಣಾಚಲ ಪ್ರದೇಶ, ಸಿಕ್ಕಿಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕ ಬದಲಾವಣೆ

ಪಿಟಿಐ
Published 17 ಮಾರ್ಚ್ 2024, 10:39 IST
Last Updated 17 ಮಾರ್ಚ್ 2024, 10:39 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕ ಬದಲಾವಣೆ ಮಾಡಿ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ.

ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆಗಳಿಗೆ ಏಪ್ರಿಲ್ 19ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ ಫಲಿತಾಂಶ ಎರಡು ದಿನ ಮುಂಚಿತವಾಗಿ ಹೊರಬೀಳಲಿದೆ. ಚುನಾವಣಾ ಆಯೋಗದ ಪ್ರಕಾರ, ಮತ ಎಣಿಕೆಯು ಜೂನ್ 4ರ ಬದಲು ಜೂನ್ 2ರಂದು ನಡೆಯಲಿದೆ.

ADVERTISEMENT

ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆ ಅವಧಿ ಜೂನ್ 2ರಂದು ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬದಲಾವಣೆ ತರಲಾಗಿದೆ.

ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ಲೋಕಸಭಾ ಕ್ಷೇತ್ರಗಳ ಫಲಿತಾಂಶ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಪ್ರಕಟಣೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.