ನವದೆಹಲಿ: ಕೋವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ ಲಸಿಕೆಗಳ ಎರಡು ಡೋಸ್ ಪಡೆದ ವಯಸ್ಕರಿಗೆ ಬೂಸ್ಟರ್ ಡೋಸ್ ಆಗಿ ‘ಸೀರಂ’ ಸಂಸ್ಥೆ ತಯಾರಿಸಿರುವ ‘ಕೊವೊವ್ಯಾಕ್ಸ್’ ಅನ್ನು ಬಳಕೆ ಮಾಡಲು ಭಾರತೀಯ ಔಷಧ ಮಹಾನಿಯಂತ್ರಕರು (ಡಿಸಿಜಿಐ) ಅನುಮೋದನೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.
ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ (ಸಿಡಿಎಸ್‌ಸಿಒ) ವಿಷಯ ತಜ್ಞರ ಸಮಿತಿಯು ಶಿಫಾರಸು ಮಾಡಿದ ಬೆನ್ನಲ್ಲೇ ಡಿಸಿಜಿಐ ಅನುಮೋದನೆ ನೀಡಿದೆ. ಲಸಿಕೆಯ ಮಾರಾಟಕ್ಕೆ ಅನುಮತಿ ಕೋರಿ ‘ಸೀರಂ’ ಇನ್‌ಸ್ಟಿಟ್ಯೂಟ್‌ನ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಇತ್ತೀಚೆಗೆ ಡಿಸಿಜಿಐಗೆ ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.