ADVERTISEMENT

ನಾಗ್ಪುರ ಕಾರ್ಖಾನೆ ಸ್ಫೋಟ | ಮತ್ತೊಬ್ಬ ಗಾಯಾಳು ಸಾವು: ಮೃತರ ಸಂಖ್ಯೆ 8ಕ್ಕೆ ಏರಿಕೆ

ಪಿಟಿಐ
Published 15 ಜೂನ್ 2024, 11:17 IST
Last Updated 15 ಜೂನ್ 2024, 11:17 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ ಇಂದು (ಶನಿವಾರ) ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರದ್ಧಾ ವನರಾಜ್‌ ಪಾಟೀಲ್‌ ಎಂಬುವವರು ಸಾವಿಗೀಡಾದ್ದಾರೆ. ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ ಪ್ರಮೋದ ಚಾವರೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಾಂಡೆ ಆಸ್ಪತ್ರೆ ನಿರ್ದೇಶಕ ಡಾ. ಪಿನಾಕ್‌ ದಾಂಡೆ ಪಿಟಿಐಗೆ ತಿಳಿಸಿದ್ದಾರೆ.

ADVERTISEMENT

ಇದರೊಂದಿಗೆ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಆರು ಮಹಿಳೆಯರು ಸೇರಿದಂತೆ ಇಬ್ಬರು ಪುರುಷರು ಮೃತಪಟ್ಟಿದ್ದಾರೆ.

ನಾಗ್ಪುರ ಸಮೀಪದ ಧಾಮ್ನಾ ಗ್ರಾಮದಲ್ಲಿರುವ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಗುರುವಾರ ಮಧ್ಯಾಹ್ನ ಸ್ಫೋಟ ಸಂಭವಿಸಿತ್ತು. ಗಾಯಗೊಂಡಿದ್ದ 9 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಫೋಟ ಸಂಭವಿಸಿದಾಗ, ಸಂತ್ರಸ್ತರು ಪ್ಯಾಕಿಂಗ್‌ ವಿಭಾಗದಲ್ಲಿದ್ದರು ಎನ್ನಲಾಗಿದೆ.

ಘಟನೆ ಸಂಬಂಧ ಚಾಮುಂಡಿ ಎಕ್ಸ್‌ಪ್ಲೋಸಿವ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಾರ್ಖಾನೆ ನಿರ್ದೇಶಕ ಜಯ್‌ ಖೇಮ್ಖಾ ಹಾಗೂ ವ್ಯವಸ್ಥಾಪಕ ಸಾಗರ್‌ ದೇಶಮುಖ್‌ ಅವರನ್ನು ಬಂಧಿಸಲಾಗಿದ್ದು, ಹಿಂಗ್ನಾ ಪ್ರಥಮ ದರ್ಜೆ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯವು ತಲಾ ₹50 ಸಾವಿರ ಶೂರಿಟಿ ಆಧಾರದ ಮೇಲೆ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.