ADVERTISEMENT

ತಮಿಳುನಾಡು | ನಕಲಿ ಮದ್ಯ ಸೇವನೆ ದುರಂತ: ಮೃತರ ಸಂಖ್ಯೆ 34ಕ್ಕೆ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜೂನ್ 2024, 2:33 IST
Last Updated 20 ಜೂನ್ 2024, 2:33 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

(ಐಸ್ಟೋಕ್)

ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಸುಮಾರು 1,00 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಸಾವಿನ ಸಂಖ್ಯೆ ಏರಿಕೆಯಾಗುವ ಸಂಭವ ಇದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಕರಣ ಸಂಬಂಧ ಈವರೆಗೆ ನಾಲ್ವರನ್ನು ಬಂಧಿಸಲಾಗಿದೆ.

ನಕಲಿ ಮದ್ಯ ದುರಂತಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

'ಕಲ್ಲಕುರಿಚಿ ದುರಂತ ಆಘಾತವನ್ನು ಉಂಟು ಮಾಡಿದೆ. ಆರೋಪಿಯನ್ನು ಬಂಧಿಸಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು' ಎಂದು ಅವರು ಹೇಳಿದ್ದಾರೆ.

ಅಲ್ಲದೆ ತನಿಖೆಗೆ ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ಗೋಕುಲ್‌ದಾಸ್ ನೇತೃತ್ವದಲ್ಲಿ ಆಯೋಗ ರಚಿಸಿದೆ.

ತಮಿಳುನಾಡು ರಾಜ್ಯಪಾಲ ಆರ್‌.ವಿ.ರವಿ ಸಹ ದುರಂತಕ್ಕೆ ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.