ಮುಂಬೈ: ಲೋಕಪಾಲರ ನೇಮಕಕ್ಕೆ ಒತ್ತಾಯಿಸಿ ಜನವರಿ 30ರಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿಸಾಮಾಜಿಕಕಾರ್ಯಕರ್ತಅಣ್ಣಾಹಜಾರೆಶನಿವಾರ ಹೇಳಿದ್ದಾರೆ.
ಖಾಸಗಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು ಭ್ರಷ್ಟಾಚಾರ ತಡೆಯುವ ಉದ್ದೇಶದ ಲೋಕಪಾಲ ಸಂಸ್ಥೆ ಸ್ಥಾಪಿಸುವುದಕ್ಕೆ ಸಂಬಂಧಿಸಿದ ಲೋಕಪಾಲ ಮತ್ತು ಲೋಕಾಯುಕ್ತ ಕಾಯ್ದೆಗೆ 2013ರಲ್ಲೇ ಅನುಮೋದನೆ ದೊರೆತಿದೆ . 2014ರಲ್ಲಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಲೋಕಪಾಲರ ನೇಮಕ ಮಾಡಲಿದೆ ಎಂಬ ನಿರೀಕ್ಷೆಯನ್ನು ಹೊಂದಲಾಗಿತ್ತು. ಆದರೆ ಮೋದಿ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಏನನ್ನು ಮಾಡಿಲ್ಲ ಎಂದು ಅಣ್ಣಾಹಜಾರೆಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲೋಕಪಾಲರ ನೇಮಕಕ್ಕೆ ಒತ್ತಾಯಿಸಿ ಆಗ್ರಹಿಸಿ ಜನವರಿ 30ರಿಂದ ರಾಲೇಗಾವ್‌ಸಿದ್ದಿಯಲ್ಲಿಉಪವಾಸ ಸತ್ಯಾಗ್ರಹ ನಡೆಸುವ ನಿರ್ಧಾರ ಮಾಡಿರುವುದಾಗಿ ಅಣ್ಣಾಹಜಾರೆಹೇಳಿದ್ದಾರೆ.
ಭ್ರಷ್ಟಾಚಾರತಡೆಸಂಸ್ಥೆಲೋಕಪಾಲದಮುಖ್ಯಸ್ಥರ ನೇಮಕಕ್ಕೆಫೆಬ್ರುವರಿ28ರೊಳಗೆ ಹೆಸರುಗಳನ್ನು ಸೂಚಿಸಬೇಕು ಎಂದು ಶೋಧ ಸಮಿತಿಗೆ ಇತ್ತೀಚೆಗೆಸುಪ್ರೀಂಕೋರ್ಟ್ ಸೂಚನೆ ನೀಡಿದೆ.ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರು ಶೋಧ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.