ಚೆನ್ನೈ: ಮೂತ್ರನಾಳದ ಸೋಂಕು ಮತ್ತು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ತಮಿಳ್ನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿಯವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
ಕರುಣಾನಿಧಿ ಚಿಕಿತ್ಸೆ ಪಡೆಯುತ್ತಿರುವ ಕಾವೇರಿ ಆಸ್ಪತ್ರೆಯ ವೈದ್ಯರು ಈ ಮಾಹಿತಿ ನೀಡಿದ್ದಾರೆ.
ಕರುಣಾನಿಧಿ ಅವರ ಆಂತರಿಕ ಅವಯವಗಳ ಕಾರ್ಯ ಚಟುವಟಿಕೆ ಸಹಜ ಸ್ಥಿತಿಯಲ್ಲಿ ಇಲ್ಲ. ಮುಂದಿನ 24 ಗಂಟೆಗಳ ನಂತರವೇ ಆರೋಗ್ಯ ಸ್ಥಿತಿ ಬಗ್ಗೆ ಹೇಳಲಾಗುವುದು ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತೀವ್ರ ನಿಗಾ ಘಟಕದಲ್ಲಿರುವ ಕರುಣಾನಿಧಿಯವರ ಆರೋಗ್ಯ ಕೆಲವು ದಿನಗಳ ಹಿಂದೆ ಚೇತರಿಸಿಕೊಂಡಿತ್ತು.ಆದರೆ ಸೋಮವಾರ ಸಂಜೆ ಆರೋಗ್ಯ ಸ್ಥಿತಿಯಲ್ಲಿ ಏರುಪೇರು ಉಂಟಾಗಿದೆ ಎಂದು ಬಲ್ಲಮೂಲಗಳು ವರದಿ ಮಾಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.