ADVERTISEMENT

ಹೂಡಾ ತಮ್ಮ ಲಾಭಕ್ಕೆ ವಿನೇಶ್‌ರನ್ನು ರಾಜಕೀಯಕ್ಕೆ ಕರೆತಂದಿದ್ದಾರೆ: ಮಹಾವೀರ್ ಫೋಗಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಅಕ್ಟೋಬರ್ 2024, 9:55 IST
Last Updated 5 ಅಕ್ಟೋಬರ್ 2024, 9:55 IST
<div class="paragraphs"><p>ಮಹಾವೀರ್ ಫೋಗಟ್</p></div>

ಮಹಾವೀರ್ ಫೋಗಟ್

   

–ಪಿಟಿಐ ಚಿತ್ರ

ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಸ್ಪರ್ಧಿಸಿರುವ ಬಗ್ಗೆ ಅವರ ಚಿಕ್ಕಪ್ಪ ಮಹಾವೀರ್ ಫೋಗಟ್ ಪ್ರತಿಕ್ರಿಯಿಸಿದ್ದಾರೆ.

ADVERTISEMENT

‘ಬಡವರು, ರೈತರು, ಕಾರ್ಮಿಕರು, ವ್ಯಾಪಾರಿಗಳು ಮತ್ತು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತಹ ನಾಯಕರಿಗೆ ನಾನು ಮತ ಹಾಕಿದ್ದೇನೆ. ಕಾಂಗ್ರೆಸ್‌ನ ಹಿರಿಯ ಸಂಸದ ದೀಪೇಂದರ್ ಹೂಡಾ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ವಿನೇಶ್ ಫೋಗಟ್ ಅವರನ್ನು ರಾಜಕೀಯಕ್ಕೆ ಕರೆತಂದಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿನೇಶ್‌ ಫೋಗಟ್ ಅವರು ಜುಲಾನಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿ ಯೋಗೇಶ್‌ ಬೈರಾಗಿ ಅವರನ್ನು ಕಣಕ್ಕಿಳಿಸಿದೆ.

90 ಸದಸ್ಯಬಲದ ಹರಿಯಾಣ ವಿಧಾನಸಭೆಗೆ ಇಂದು (ಶನಿವಾರ) ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದ್ದು, ರಾಜ್ಯದಲ್ಲಿ ಬಿಜೆಪಿಯು ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲಿದೆಯೇ ಅಥವಾ 10 ವರ್ಷದ ಅಂತರದ ಬಳಿಕ ಕಾಂಗ್ರೆಸ್‌ ಪಕ್ಷವು ಸರ್ಕಾರ ರಚಿಸಲಿದೆಯೇ ಎಂಬುದು ನಿರ್ಧಾರವಾಗಲಿದೆ.

ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆ ಇದೆ. ಇತರ ಪಕ್ಷಗಳಾದ ಎಎಪಿ ಮತ್ತು ಐಎನ್‌ಎಲ್‌ಡಿ–ಬಿಎಸ್‌ಪಿ ಹಾಗೂ ಜೆಜೆಪಿ–ಎಎಸ್‌ಪಿ ಸುಮಾರು 20 ಕ್ಷೇತ್ರಗಳ ಫಲಿತಾಂಶವನ್ನು ನಿರ್ಧರಿಸುವ ಸಾಧ್ಯತೆ ಇದೆ. ಇದು ಫಲಿತಾಂಶದ ಮೇಲೆ ನಿರ್ಣಾಯಕ ಪರಿಣಾಮ ಬೀರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.