ನವದೆಹಲಿ: ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಶುರುವಾದ ನಂತರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆದಿದೆ ಎಂದು ಅಮೆರಿಕ ಸರ್ಕಾರದ ವರದಿಯೊಂದು ಹೇಳಿರುವುದು ‘ತೀರಾ ಪಕ್ಷಪಾತದಿಂದ ಕೂಡಿದೆ’ ಎಂದು ಕೇಂದ್ರ ಸರ್ಕಾರ ಗುರುವಾರ ಪ್ರತಿಕ್ರಿಯಿಸಿದೆ.
ಭಾರತದ ಬಗ್ಗೆ ಸರಿಯಾಗಿ ಅರಿಯದೆ ಸಿದ್ಧಪಡಿಸಿರುವ ವರದಿ ಇದು. ಇದಕ್ಕೆ ಬೆಲೆ ಇಲ್ಲ ಎಂದು ಕೂಡ ಕೇಂದ್ರವು ಖಾರವಾಗಿ ಹೇಳಿದೆ. ಅಮೆರಿಕದ ವಿದೇಶಾಂಗ ಇಲಾಖೆಯು ಈ ವರದಿಯನ್ನು ಸಿದ್ಧಪಡಿಸಿದೆ.
ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಕಚೇರಿಯ ಮೇಲೆ ಕೇಂದ್ರ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿಯ ಕುರಿತೂ ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.