ADVERTISEMENT

ಶಾ ವಿರುದ್ಧ ಮಾನಹಾನಿ ಹೇಳಿಕೆ: ಜುಲೈ 2ರೊಳಗೆ ರಾಹುಲ್‌ ಹಾಜರಾಗಲು ಕೋರ್ಟ್‌ ಸೂಚನೆ

ಪಿಟಿಐ
Published 26 ಜೂನ್ 2024, 9:24 IST
Last Updated 26 ಜೂನ್ 2024, 9:24 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ಸುಲ್ತಾನ್‌ಪುರ (ಉತ್ತರಪ್ರದೇಶ): ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಜುಲೈ 2ರೊಳಗೆ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಬುಧವಾರ ನಿರ್ದೇಶನ ನೀಡಿದೆ.

ನ್ಯಾಯಾಲಯದಲ್ಲಿ ಹಾಜರಿದ್ದ ರಾಹುಲ್‌ ಗಾಂಧಿ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ ಹಾಗೂ ದೂರುದಾರರ ಪರ ವಕೀಲ ಸಂತೋಷ್ ಕುಮಾರ್ ಅವರ ವಾದ– ಪತ್ರಿವಾದವನ್ನು ಆಲಿಸಿದ ಬಳಿಕ ನ್ಯಾಯಾಲಯವು ಈ ಆದೇಶವನ್ನು ಪ್ರಕಟಿಸಿತು.

2018ರ ಮೇ 8ರಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ದ ರಾಹುಲ್‌ ಗಾಂಧಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ಆರೋಪಿಸಿ ವಿಜಯ್‌ ಮಿಶ್ರಾ ಎಂಬುವವರು 2018ರ ಆಗಸ್ಟ್‌ 4ರಂದು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ADVERTISEMENT

ಫೆಬ್ರುವರಿ 20ರಂದು ಈ ಪ್ರಕರಣ ಸಂಬಂಧ ನ್ಯಾಯಾಲಯವು ರಾಹುಲ್‌ ಗಾಂಧಿಗೆ ಜಾಮೀನು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.