ADVERTISEMENT

ಆಗಸ್ಟ್‌ 23ರಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಮೆರಿಕ ಪ್ರವಾಸ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2024, 7:51 IST
Last Updated 21 ಆಗಸ್ಟ್ 2024, 7:51 IST
<div class="paragraphs"><p> ರಾಜನಾಥ್ ಸಿಂಗ್</p></div>

ರಾಜನಾಥ್ ಸಿಂಗ್

   

ನವದೆಹಲಿ: ಜಾಗತೀಕ ಮಟ್ಟದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ವೃದ್ದಿಸುವ ನಿಟ್ಟಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಗಸ್ಟ್‌ 23ರಿಂದ ನಾಲ್ಕು ದಿನಗಳ ಅಮೆರಿಕ ಪ್ರವಾಸ ಮಾಡಲಿದ್ದಾರೆ. 

ಪ್ರವಾಸದ ವೇಳೆ, ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಹಾಗೂ ರಾಷ್ಡ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಜೊತೆ ಮಾತುಕತೆ ನಡೆಸಲಿದ್ದಾರೆ. 

ADVERTISEMENT

ಆಸ್ಟಿನ್ ಜೊತೆಗಿನ ಮಾತುಕತೆ ವೇಳೆ, ರಕ್ಷಣಾ ಇಲಾಖೆಗೆ ಸಂಬಂಧಿಸಿದಂತೆ ಯುದ್ಧ ವಿಮಾನದ ಎಂಜಿನ್‌ಗಳು ಸೇರಿದಂತೆ ವಿವಿಧ ಉಪಕರಣಗಳ ಖರೀದಿ ಹಾಗೂ ಕೆಲವು ಮಹತ್ವದ ಒಪ್ಪಂದಗಳಿಗೆ ಸಹಿ ಮಾಡುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದರು. 

ಜಾಗತಿಕ ಮಟ್ಟದಲ್ಲಿ ಭಾರತ ಮತ್ತು ಅಮೆರಿಕ ನಡುವೆ ರಕ್ಷಣಾ ವಲಯದಲ್ಲಿನ ಅಭಿವೃದ್ದಿಗೆ ಈ ಭೇಟಿ ಮಹತ್ವ ಪಡೆದುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ. 

ರಾಜನಾಥ್ ಸಿಂಗ್ ಅವರು ಅಮೆರಿಕದ ಪ್ರಮುಖ ರಕ್ಷಣಾ ಕೈಗಾರಿಕೆಗಳ ಜೊತೆಗೆ ಉನ್ನತ ಮಟ್ಟದ ಸಭೆ ನಡೆಸಲಿದ್ದು, ರಕ್ಷಣಾ ಸಹಭಾಗಿತ್ವದ ಕುರಿತು ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕದಲ್ಲಿರುವ ಭಾರತೀಯ ಸಮುದಾಯದೊಂದಿಗೂ ಅವರು ಮಾತುಕತೆ ನಡೆಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.