ADVERTISEMENT

ದೆಹಲಿ ವಾಯುಮಾಲಿನ್ಯ| ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ: ಗೌತಮ್‌ ಗಂಭೀರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ನವೆಂಬರ್ 2023, 12:45 IST
Last Updated 9 ನವೆಂಬರ್ 2023, 12:45 IST
ಗೌತಮ್‌ ಗಂಭೀರ್‌ 
ಗೌತಮ್‌ ಗಂಭೀರ್‌    

ಬೆಂಗಳೂರು: ದೆಹಲಿ–ಎನ್‌ಸಿಆರ್‌ನಲ್ಲಿ ಗಾಳಿ ಗುಣಮಟ್ಟವು ತೀವ್ರ ಕಳಪೆ ಮಟ್ಟಕ್ಕೆ ಕುಸಿದಿದ್ದು, ಇದರ ಗಂಭೀರ ಪರಿಣಾಮ ಮಕ್ಕಳ ಮೇಲಾಗುತ್ತಿದೆ ಎಂದು ಬಿಜೆಪಿ ಸಂಸದ ಹಾಗೂ ಭಾರತ ತಂಡದ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್ ಆತಂಕ ವ್ಯಕ್ತಪಡಿಸಿದ್ದಾರೆ

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೆಹಲಿಯಲ್ಲಿ ಗಾಳಿ ಗುಣಮಟ್ಟವು ಕಳಪೆ ಮಟ್ಟಕ್ಕೆ ಕುಸಿದಿದ್ದು, ಇದರ ಪರಿಣಾಮ ನೇರವಾಗಿ ಮಕ್ಕಳ ಉಸಿರಾಟದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. 70ರಷ್ಟು ಮಕ್ಕಳು ನೆಬ್ಯುಲೈಜರ್‌ ಬಳಸುತ್ತಿದ್ದಾರೆ. ಇದರಲ್ಲಿ ಮಕ್ಕಳ ತಪ್ಪು ಏನಿದೆ? ಎಂದು ಪ್ರಶ್ನಿಸಿದ್ದಾರೆ. ಒಬ್ಬ ರಾಜಕಾರಣಿ ಕೇವಲ ವೋಟ್‌ ಬ್ಯಾಂಕ್‌ ರಾಜಕೀಯಕ್ಕಾಗಿ ಮೂರ್ಖನಾದರೆ, ಇದರ ಪರಿಣಾಮವನ್ನು ಮಕ್ಕಳು ಅನುಭವಿಸಬೇಕೆ? ಎಂದು ಕೇಜ್ರಿವಾಲ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ದೆಹಲಿ ವಾಯು ಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ಅಲ್ಲಿನ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಪರಿಸರ ಸಚಿವ ಗೋಪಾಲ್ ರಾಯ್ ಪ್ರತಿಕ್ರಿಯಿಸಿ, ‘ಮೋಡ ಬಿತ್ತನೆ ಮೂಲಕ ಕೃತಕ ಮಳೆಯಾಗುವಂತೆ ಪ್ರಯತ್ನ ಕೈಗೊಳ್ಳಲಾಗುವುದು’ ಎಂದಿದ್ದಾರೆ.

ADVERTISEMENT

ವಾಯುಮಾಲಿನ್ಯ ಕುರಿತ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಕೃಷಿ ತ್ಯಾಜ್ಯ ಸುಡುವಿಕೆ, ವಾಹನಗಳಿಂದ ಉಂಟಾಗುವ ಮಾಲಿನ್ಯ ಮತ್ತು ನಗರದ ಘನತ್ಯಾಜ್ಯವನ್ನು ಬಯಲಿನಲ್ಲಿ ಸುಡುವುದರಿಂದ ಆಗುತ್ತಿರುವ ಮಾಲಿನ್ಯ ಸೇರಿದಂತೆ ವಿವಿಧ ವಿಷಯಗಳ ಕುರಿತು ಪರಿಶೀಲಿಸಿತು.

ರಾಜಸ್ಥಾನ ಮತ್ತು ಉತ್ತರ ಪ್ರದೇಶದ ಹಲವು ನಗರಗಳಲ್ಲಿ ಸಹ ಗಾಳಿಯು ಅಪಾಯಕಾರಿ ಗುಣಮಟ್ಟ ಹೊಂದಿರುವುದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.