ನವದೆಹಲಿ: ಆನಂದ ವಿಹಾರ್ ಪ್ರದೇಶದಲ್ಲಿ ವಾಯು ಮಾಲಿನ್ಯ ವಿಪರೀತ ಹದಗೆಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಪರಿಸರ ಸಚಿವ ಗೋಪಾಲ್ ರಾಯ್ ಅವರು ನಾಳೆ ತುರ್ತು ಸಭೆ ಕರೆದಿದ್ದಾರೆ.
ರಾಷ್ಟ್ರ ರಾಜಧಾನಿಯ ಪ್ರಮುಖ 13 ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ ಎಂದು ಸಚಿವಾಲಯದ ಹೇಳಿಕೆ ಉಲ್ಲೇಖಿಸಿ 'ಎಎನ್‌ಐ' ಟ್ವೀಟ್ ಮಾಡಿದೆ.
ದೆಹಲಿ ಸಿಬ್ಬಂದಿ ಸಚಿವಾಲಯದಲ್ಲಿ ತುರ್ತು ಸಭೆ ನಡೆಯಲಿದ್ದು, ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಹಾಜರಿರಬೇಕು ಎಂದು ಸೂಚಿಸಿದ್ದಾರೆ.
ಗಾಳಿಯ ಗುಣಮಟ್ಟ ಹದಗೆಟ್ಟಿರುವ ಕಾರಣ ದೆಹಲಿ ಸರ್ಕಾರವು ಎಲ್ಲಾ ಮಾದರಿಯ ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆ ಮೇಲೆ ನಿಷೇಧ ಹೇರಿದೆ. ಈ ಕ್ರಮವು 2025ರ ಜನವರಿ 1ರವರೆಗೆ ಜಾರಿಯಲ್ಲಿರಲಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.