ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಂಭೀರ ಸ್ವರೂಪ ಪಡೆದುಕೊಂಡಿರುವ ಬಗ್ಗೆ ದೇಶದಾದ್ಯಂತ ಚರ್ಚೆಯಾಗುತ್ತಿದೆ. ದೆಹಲಿಯ ಗಾಳಿಯಲ್ಲಿ‘ಪಿಎಂ 2.5’ಕಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.
ಏನಿದು‘ಪಿಎಂ 2.5’?
‘ಪಿಎಂ’ ಎಂಬುದು ‘ಪರ್ಟಿಕ್ಯುಲೇಟ್ ಮ್ಯಾಟರ್’ ಎಂಬುದರ ಸಂಕ್ಷಿಪ್ತ ರೂಪ. ಗಾಳಿಯಲ್ಲಿರುವ ಮಾಲಿನ್ಯಕಾರಕ ಕಣಗಳನ್ನು ಗುರುತಿಸಲು ‘ಪಿಎಂ’ ಎಂಬ ಹೆಸರನ್ನು ಬಳಸಲಾಗುತ್ತದೆ. ಗಾತ್ರಕ್ಕೆ ಅನುಗುಣವಾಗಿ ಇವನ್ನು ‘ಪಿಎಂ 2.5’ ಮತ್ತು ಪಿಎಂ 10’ ಎಂದು ವರ್ಗೀಕರಿಸಲಾಗಿದೆ. 2.5 ಮೈಕ್ರಾನ್‌ಗಿಂತ ಕಡಿಮೆ ಗಾತ್ರದ ಕಣಗಳನ್ನು ಪಿಎಂ 2.5 ಎಂದು ಕರೆಯಲಾಗುತ್ತದೆ. ಇವು ಹೆಚ್ಚು ಅಪಾಯಕಾರಿಯಾದ ಕಣಗಳಾಗಿವೆ.
ಇಂಗಾಲದ ಡೈ ಆಕ್ಸೈಡ್, ಇಂಗಾಲದ ಮಾನಾಕ್ಸೈಡ್, ಸಾರಜನಕದ ಆಕ್ಸೈಡ್‌ನ ಕಣಗಳು ಈ ರೂಪದಲ್ಲಿ ಇರುತ್ತವೆ. ದೆಹಲಿಯ ಗಾಳಿಯಲ್ಲಿ ಕಂಡುಬಂದಿರುವುದು ಇದೇ ಕಣಗಳಾಗಿವೆ.
ತೊಂದರೆಯೇನು?
ಇವು ತೀರಾ ಚಿಕ್ಕದಾಗಿರುವ ಕಾರಣ ಬರಿಗಣ್ಣಿಗೆ ಗೋಚರಿಸುವುದಿಲ್ಲ. 40 ‘ಪಿಎಂ 2.5’ ಕಣಗಳನ್ನು ಒಟ್ಟುಸೇರಿಸಿದರೆ ಮಾತ್ರ ಅವು ಬರಿಗಣ್ಣಿಗೆ ಗೋಚರಿಸುತ್ತವೆ. ಈ ಕಣಗಳ ಗಾತ್ರ ತೀರಾ ಸಣ್ಣದಾಗಿರುವ ಕಾರಣ ಮೂಗು ಮತ್ತು ಬಾಯಿಯ ಮೂಲಕ ಶ್ವಾಸಕೋಶವನ್ನು ಸುಲಭವಾಗಿ ಪ್ರವೇಶಿಸುತ್ತವೆ
‘ಪಿಎಂ 2.5’ ಮೂಲಗಳು...
ಕೃಷಿತ್ಯಾಜ್ಯದ ದಹನ,ಕಾರ್ಖಾನೆಗಳು ಮತ್ತು ಉಷ್ಣವಿದ್ಯುತ್ ಸ್ಥಾವರ, ವಾಹನಗಳ ಹೊಗೆ, ಘನತ್ಯಾಜ್ಯ ದಹನ
‘ಪಿಎಂ 2.5’ ಕಣಗಳಿಂದ ಎದುರಾಗುವ ಸಮಸ್ಯೆಗಳು
ಕಣ್ಣಿನ ನವೆ, ಚರ್ಮದ ಅಲರ್ಜಿ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆ, ಶ್ವಾಸಕೋಶದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಹೃದಯಾಘಾತ, ಪಾರ್ಶ್ವವಾಯು
ಯಾರಿಗೆಲ್ಲಾ ಅಪಾಯ?
ಶಿಶುಗಳು, ಮಕ್ಕಳು, ಗರ್ಭಿಣಿಯರು, ವೃದ್ಧರು
ಇದನ್ನೂ ಓದಿ:ಶುದ್ಧಗಾಳಿಗಾಗಿ ಯೋಜನೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.