ADVERTISEMENT

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕುಸಿತ: ದುರಸ್ತಿಯಾಗದ ಸ್ಮಾಗ್ ಟವರ್, ಜನರಲ್ಲಿ ಆತಂಕ!

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಅಕ್ಟೋಬರ್ 2024, 6:08 IST
Last Updated 22 ಅಕ್ಟೋಬರ್ 2024, 6:08 IST
<div class="paragraphs"><p>ದೆಹಲಿಯ ಆನಂದ್ ವಿಹಾರದಲ್ಲಿರುವ ಸ್ಮಾಗ್ ಟವರ್‌ನ ನೋಟ</p></div>

ದೆಹಲಿಯ ಆನಂದ್ ವಿಹಾರದಲ್ಲಿರುವ ಸ್ಮಾಗ್ ಟವರ್‌ನ ನೋಟ

   

–ಪಿಟಿಐ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಅಪಾಯಕಾರಿ ಮಟ್ಟ ತಲುಪಿದ್ದು, ಕಳೆದೊಂದು ವರ್ಷದಿಂದ ಸ್ಮಾಗ್ ಟವರ್ ಕೂಡ ದುರಸ್ತಿಯಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ADVERTISEMENT

ವಾಯು ಗುಣಮಟ್ಟ ಸೂಚ್ಯಂಕ’ದ (ಎಕ್ಯುಐ) ಪ್ರಕಾರ ದೆಹಲಿ ನಗರದ ಗಾಳಿ ಗುಣಮಟ್ಟ ಸರಾಸರಿ 310ರಷ್ಟಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ಪರಿಣಾಮವಾಗಿ ಮುಂಬರುವ ದಿನಗಳಲ್ಲಿ ದೆಹಲಿಯ ಒಟ್ಟಾರೆ ಗಾಳಿಯ ಗುಣಮಟ್ಟವು ‘ಅತ್ಯಂತ ಕಳಪೆ’ ಮಟ್ಟಕ್ಕೆ ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಂಕಿಅಂಶಗಳಿಂದ ತಿಳಿದುಬಂದಿದೆ.

‘ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಉಸಿರಾಡಲು ತುಂಬಾ ಕಷ್ಟವಾಗಿದೆ. ಕಳೆದೊಂದು ವರ್ಷದಿಂದ ಸ್ಮಾಗ್ ಟವರ್ ಕಾರ್ಯನಿರ್ವಹಿಸುತ್ತಿಲ್ಲ. ಸ್ಮಾಗ್ ಟವರ್ ಕಾರ್ಯ ನಿರ್ವಹಿಸಿದರೆ ಗಾಳಿಯು ಶುದ್ಧವಾಗಿರುತ್ತದೆ. ಹಾಗಾಗಿ ಅಧಿಕಾರಿಗಳು ಕೂಡಲೇ ಗಮನ ಹರಿಸಬೇಕು’ ಎಂದು ಸ್ಥಳೀಯರೊಬ್ಬರು ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದೆ. ಚಳಿಗಾಲದ ಹಿನ್ನೆಲೆಯಲ್ಲಿ ಈ ಸಮಸ್ಯೆ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ ಎಂದು ಸ್ಥಳೀಯರೊಬ್ಬರು ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.