ADVERTISEMENT

ದೆಹಲಿ ಮಾಲಿನ್ಯ ನಿಯಂತ್ರಣಕ್ಕೆ ಕ್ರಮ: ಪಟಾಕಿ ಮಾರಾಟ, ಬಳಕೆಗೆ ನಿಷೇಧ

ಪಿಟಿಐ
Published 14 ಅಕ್ಟೋಬರ್ 2024, 11:06 IST
Last Updated 14 ಅಕ್ಟೋಬರ್ 2024, 11:06 IST
<div class="paragraphs"><p> (ಸಂಗ್ರಹ ಚಿತ್ರ)</p></div>

(ಸಂಗ್ರಹ ಚಿತ್ರ)

   

ನವದೆಹಲಿ: ಎಲ್ಲಾ ಮಾದರಿಯ ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಗೆ ನಿಷೇಧ ವಿಧಿಸಿರುವ ದೆಹಲಿ ಸರ್ಕಾರ, 2025ರ ಜನವರಿ 1ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ಹೇಳಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪರಿಸರ ಸಚಿವ ಗೋಪಾಲ್ ರೈ, ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರವನ್ನು ತೆಗದುಕೊಂಡಿದ್ದು, ಜನರು ಈ ಆದೇಶವನ್ನು ಪಾಲಿಸಬೇಕೆಂದು ವಿನಂತಿಸಿದ್ದಾರೆ.

ADVERTISEMENT

ಚಳಿಗಾಲದಲ್ಲಿ ಹೆಚ್ಚುವ ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಈ ಸೂಚನೆಯನ್ನು ನೀಡಿದೆ. ಈ ಆದೇಶವನ್ನು ಪಾಲಿಸದವರ ವಿರುದ್ಧ ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯು ಕ್ರಮ ಕೈಗೊಳ್ಳಲಿದೆ ಎಂದೂ ರೈ ಹೇಳಿದ್ದಾರೆ.

ಆನ್‌ಲೈನ್‌ ಮಾರಾಟ ಸೇರಿದಂತೆ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ನಿಷೇಧ ಹೇರಿದ್ದು, ಈ ಆದೇಶವನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ರೈ ತಿಳಿಸಿದ್ದಾರೆ.

ಚಳಿಗಾಲದಲ್ಲಿ ತಾಪಮಾನ ಕಡಿಮೆ ಇರುವುದರಿಂದ ಮಾಲಿನ್ಯ ಹೆಚ್ಚಾಗುತ್ತದೆ. ಇಂದು ಸಹ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿದ್ದು, ಎಕ್ಯೂಐ ಸೂಚ್ಯಂಕದಲ್ಲಿ ಕಳಪೆ ವಾಯುಗುಣಮಟ್ಟ ದಾಖಲಾಗಿದೆ ಎಂದು ರೈ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.