ADVERTISEMENT

ಸಂದೇಶ್‌ಖಾಲಿ ಪ್ರಕರಣ: ಟಿಎಂಸಿ ಸರ್ಕಾರದ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2024, 13:04 IST
Last Updated 1 ಮಾರ್ಚ್ 2024, 13:04 IST
ಸಂದೇಶ್‌ಖಾಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ದೆಹಲಿಯಲ್ಲಿ ತೀನ್‌ ಮೂರ್ತಿ ಚೌಕ್‌ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚದೇವ್‌ ಅವರು ಬ್ಯಾರಿಕೇಡ್‌ ಅನ್ನು ದಾಟಲು ಯತ್ನಿಸಿದರು –ಪಿಟಿಐ ಚಿತ್ರ

ನವದೆಹಲಿ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸರ್ಕಾರದ ವಿರುದ್ಧ ದೆಹಲಿ ಬಿಜೆಪಿ ಘಟಕವು ತೀನ್‌ ಮೂರ್ತಿ ಚೌಕ್‌ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.

ತೀನ್‌ ಮೂರ್ತಿ ಚೌಕ್‌ನಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು, ‘ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಗ್ರಾಮಸ್ಥರ ಭೂಮಿ ಕಸಿದಿರುವ ಪ್ರಕಣದ ಪ್ರಮುಖ ಆರೋಪಿ ಹಾಗೂ ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ ಅವರನ್ನು ಗುರುವಾರ ಬಂಧಿಸಿದ ಬೆನ್ನಲ್ಲೇ ಬಿಜೆಪಿ ಈ ಪ್ರತಿಭಟನೆ ನಡೆಸಿದೆ.

ADVERTISEMENT

ಶಹಜಹಾನ್‌ ಬಂಧನಕ್ಕೊಳಗಾದ ತಕ್ಷಣವೇ ಆರು ವರ್ಷಗಳ ಕಾಲ ಅವರನ್ನು ಟಿಎಂಸಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.