ADVERTISEMENT

ಸ್ಪೈಸ್‌ಜೆಟ್ ವಿಮಾನದಲ್ಲಿ ಬೆಂಕಿ: ತುರ್ತು ಭೂಸ್ಪರ್ಶ, ಎಲ್ಲರೂ ಅಪಾಯದಿಂದ ಪಾರು

​ಪ್ರಜಾವಾಣಿ ವಾರ್ತೆ
Published 19 ಜೂನ್ 2022, 8:44 IST
Last Updated 19 ಜೂನ್ 2022, 8:44 IST
ಸ್ಪೈಸ್‌ಜೆಟ್ ವಿಮಾನ
ಸ್ಪೈಸ್‌ಜೆಟ್ ವಿಮಾನ   

ಪಟ್ನಾ: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮಕೂಡಲೇಸ್ಪೈಸ್‌ಜೆಟ್ ವಿಮಾನವನ್ನು ಮರಳಿ ನಿಲ್ದಾಣದಲ್ಲಿ ಇಳಿಸಲಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

ಸ್ಪೈಸ್‌ಜೆಟ್ ವಿಮಾನ ಎಸ್‌ಜಿ723ರಲ್ಲಿ ಈ ಅಗ್ನಿ ಅವಘಡ ಉಂಟಾಗಿದೆ. ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ 185 ಜನ ಪ್ರಯಾಣಿಕರಿದ್ದರು. ಬಿಹಾರದ ಪಟ್ನಾ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ವಿಮಾನ ಪಟ್ನಾದಿಂದ ದೆಹಲಿಗೆ ತೆರಳುತ್ತಿತ್ತು.

ಟೇಕ್ ಆಫ್ ಆದ ಬಳಿಕ ವಿಮಾನದ ಮುಂಭಾಗದಿಂದ ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡಿವೆ. ಕೂಡಲೇ ಪೈಲಟ್‌ ವಿಮಾನವನ್ನು ನಿಲ್ದಾಣದಲ್ಲಿ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದ್ದು, ಅದರಲ್ಲಿದ್ದ ಎಲ್ಲ ಪ್ರಯಾಣಿಕರೂ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.