ನವದೆಹಲಿ: ಅಬಕಾರಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಮೂರನೇ ನೋಟಿಸ್‌ಗೆ ಲಿಖಿತ ಉತ್ತರ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಚಾರಣೆಗೆ ಗೈರು ಹಾಜರಾಗಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.
ತನಿಖಾ ಸಂಸ್ಥೆಯೊಂದಿಗೆ ಅರವಿಂದ ಕೇಜ್ರಿವಾಲ್ ಅವರು ಸಹಕರಿಸಲು ಸಿದ್ಧವಿರುವುದಾಗಿ ಹೇಳಿರುವ ಪಕ್ಷವು, ಅವರನ್ನು ಬಂಧಿಸುವ ಉದ್ದೇಶದಿಂದ ನೋಟಿಸ್ ನೀಡಿದ್ದಾರೆ ಎಂದು ಆರೋಪಿಸಿದೆ.
‘ಚುನಾವಣೆಗೂ ಮುನ್ನ ಯಾಕೆ ನೋಟಿಸ್ ಕಳಿಸಲಾಗಿದೆ? ಚುನಾವಣಾ ಪ್ರಚಾರದಲ್ಲಿ ಭಾಗಿಯಾಗದಂತೆ ತಡೆಯುವ ಉದ್ದೇಶದಿಂದ ಕೇಜ್ರಿವಾಲ್ ಅವರಿಗೆ ನೋಟಿಸ್ ಕಳಿಸಲಾಗುತ್ತಿದೆ’ ಎಂದು ಪಕ್ಷ ಹೇಳಿದೆ.
ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಇಂದು (ಡಿ.3) ವಿಚಾರಣೆಗೆ ಹಾಜರಾಗಬೇಕು ಎಂದು ಇ.ಡಿ, ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿತ್ತು.
ಇದೇ ಪ್ರಕರಣ ಸಂಬಂಧ ಕೇಜ್ರಿವಾಲ್ ಅವರಿಗೆ ಮೂರು ನೋಟಿಸ್ ನೀಡಲಾಗಿದ್ದು, ಒಮ್ಮೆಯೂ ಅವರು ವಿಚಾರಣೆಗೆ ಹಾಜರಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.