ADVERTISEMENT

ಮಧ್ಯಂತರ ಜಾಮೀನು: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಅರವಿಂದ ಕೇಜ್ರಿವಾಲ್

ಪಿಟಿಐ
Published 10 ಮೇ 2024, 13:52 IST
Last Updated 10 ಮೇ 2024, 13:52 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

– ಪಿಟಿಐ ಚಿತ್ರ

ನವದೆಹಲಿ: ಅಬಕಾರಿ ನೀತಿ ಹಗರಣ ಸಂಬಂಧ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಕೆಲ ಹೊತ್ತಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಶುಕ್ರವಾರ ಸಂಜೆ ತಿಹಾರ್‌ ಜೈಲಿನಿಂದ ಹೊರಬಂದರು.

ADVERTISEMENT

ಜೈಲು ಸಂಕೀರ್ಣದಲ್ಲಿ ನೆರೆದಿದ್ದ ನಾಯಕರು ಹಾಗೂ ನೂರಾರು ಕಾರ್ಯಕರ್ತರು ಕೇಜ್ರಿವಾಲ್ ಅವರಿಗೆ ಸ್ವಾಗತ ಕೋರಿದರು.

ತಮ್ಮ ಬೆಂಗಾವಲು ವಾಹನ ಮೂಲಕ ತಿಹಾರ್‌ ಜೈಲು ಆವರಣದಿಂದ ಅವರು ಹೊರ ಬಂದರು. ಪತ್ನಿ ಸುನೀತಾ ಕೇಜ್ರಿವಾಲ್, ಪುತ್ರಿ ಹರ್ಷಿತಾ ಹಾಗೂ ಎಎಪಿಯ ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರ ಜೊತೆ ಇದ್ದರು.

ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಜೂನ್‌ 1ರ ವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜೂನ್ 2ರಂದು ಶರಣಾಗಲು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.