ADVERTISEMENT

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ದೆಹಲಿ ಮುಖ್ಯಮಂತ್ರಿ ಆತಿಶಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಅಕ್ಟೋಬರ್ 2024, 9:59 IST
Last Updated 14 ಅಕ್ಟೋಬರ್ 2024, 9:59 IST
<div class="paragraphs"><p>ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು  ಸೋಮವಾರ ಭೇಟಿ ಮಾಡಿದರು.</p></div>

ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿ ಮಾಡಿದರು.

   

@AtishiAAP

ನವದೆಹಲಿ: ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು (ಸೋಮವಾರ) ಭೇಟಿ ಮಾಡಿದ್ದಾರೆ.

ADVERTISEMENT

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಆತಿಶಿ ಪೋಸ್ಟ್‌ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

‘ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಲಾಯಿತು. ರಾಷ್ಟ್ರ ರಾಜಧಾನಿಯ ಅಭಿವೃದ್ಧಿಗಾಗಿ ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವೆ ಸಂಪೂರ್ಣ ಸಹಕಾರ ದೊರೆಯುತ್ತದೆ ಎಂದು ನಾನು ಭಾವಿಸುತ್ತೇನೆ‘ ಎಂದು ಆತಿಶಿ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ದೆಹಲಿ ಮುಖ್ಯಮಂತ್ರಿಯಾದ ಬಳಿಕ ಆತಿಶಿ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರು, ಸೆಪ್ಟೆಂಬರ್ 13ರಂದು ಜಾಮೀನು ಪಡೆದು ಜೈಲಿನಿಂದ ಬಿಡುಗಡೆಗೊಂಡಿದ್ದರು. ಬಳಿಕ ಅಚ್ಚರಿ ಎನ್ನುವಂತೆ ಸಿಎಂ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿ ರಾಜೀನಾಮೆ ನೀಡಿದ್ದರು.

ಬಳಿಕ ನಡೆದ ಎಎಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಆತಿಶಿ ಅವರ ಹೆಸರನ್ನು ಕೇಜ್ರಿವಾಲ್‌ ಘೋಷಿಸಿದ್ದರು. ನಿರ್ಗಮಿತ ಸಿಎಂ ನಿರ್ಧಾರವನ್ನು ಎಎಪಿಯು ಸರ್ವಾನುಮತದಿಂದ ಅಂಗೀಕರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.