ADVERTISEMENT

ಹನುಮಂತನ ದೇವಾಲಯಕ್ಕೆ ಭೇಟಿ ನೀಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಪಿಟಿಐ
Published 11 ಮೇ 2024, 7:45 IST
Last Updated 11 ಮೇ 2024, 7:45 IST
<div class="paragraphs"><p>@AamAadmiParty</p></div>

@AamAadmiParty

   

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಪತ್ನಿ ಸುನಿತಾ ಕೇಜ್ರಿವಾಲ್ ಅವರು ದೆಹಲಿಯ ಕನ್ನಾಟ್‌ ಪ್ಲೇಸ್‌ನಲ್ಲಿರುವ ಹನುಮಂತನ ದೇವಾಲಯಕ್ಕೆ ಇಂದು ( ಶನಿವಾರ) ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ.

ಮಧ್ಯಂತರ ಜಾಮೀನು ಪಡೆದ ಬಳಿಕ ಇದೇ ಮೊದಲ ಬಾರಿಗೆ ಪತ್ನಿ ಸಮೇತ ಅರವಿಂದ ಕೇಜ್ರೀವಾಲ್‌ ಐತಿಹಾಸಿಕ ದೇವಾಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ADVERTISEMENT

ಈ ವೇಳೆ ಪಂಜಾಬ್‌ ಸಿಎಂ ಭಗವಂತ ಮಾನ್ ಹಾಗೂ ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಸೇರಿದಂತೆ ಎಎಪಿ ನಾಯಕರು ಉಪಸ್ಥಿತರಿದ್ದರು.

ಅರವಿಂದ ಕೇಜ್ರಿವಾಲ್‌ ಅವರು ಇಂದು ಪೂರ್ವ ಹಾಗೂ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರಗಳಲ್ಲಿ ರೋಡ್‌ ಶೋ ನಡೆಸಲಿದ್ದಾರೆ.

ಕೇಜ್ರಿವಾಲ್‌ ಅವರು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ 50 ದಿನಗಳು ಕಳೆದ ನಂತರ ಮಧ್ಯಂತರ ಜಾಮೀನು ನೀಡಿರುವ ಸುಪ್ರೀಂ ಕೋರ್ಟ್‌, 21 ದಿನಗಳ ಕಾಲ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.