ADVERTISEMENT

ದೆಹಲಿ ಕೋಚಿಂಗ್ ಸೆಂಟರ್ ದುರಂತ: ಉಪವಾಸ ಸತ್ಯಾಗ್ರಹ ಆರಂಭಿಸಿದ ವಿದ್ಯಾರ್ಥಿಗಳು

ಪಿಟಿಐ
Published 31 ಜುಲೈ 2024, 2:49 IST
Last Updated 31 ಜುಲೈ 2024, 2:49 IST
<div class="paragraphs"><p>ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು&nbsp;</p></div>

ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು 

   

– ಪಿಟಿಐ ಚಿತ್ರ

ನವದೆಹಲಿ: ದೆಹಲಿಯ ಓಲ್ಡ್‌ ರಾಜೇಂದ್ರ ನಗರದಲ್ಲಿರುವ ‘ರಾವ್ಸ್ ಐಎಎಸ್‌ ಸ್ಟಡಿ ಸರ್ಕಲ್‌’ ಕಟ್ಟಡದ ನೆಲಮಹಡಿಗೆ ಮಳೆ ನೀರು ನುಗ್ಗಿದ ಪರಿಣಾಮ ಮೂವರು ಐಎಎಸ್‌ ಆಕಾಂಕ್ಷಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ತ‍‍ಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ADVERTISEMENT

ಕಳೆದ ಮೂರು ದಿನಗಳಿಂದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತರ ಕುಟುಂಬಗಳಿಗೆ ₹5 ಕೋಟಿ ಪರಿಹಾರ ಸೇರಿದಂತೆ ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವವರೆಗೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಪ್ರತಿಭಟನಾನಿರತ ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.

ಯುಪಿಎಸ್‌ಸಿ ಕೋಚಿಂಗ್ ಲಾಬಿಗೆ ಸಂಬಂಧಿಸಿ ರಾಜ್ಯ ಸರ್ಕಾರ ಅಥವಾ ಮಹಾನಗರ ಪಾಲಿಕೆ ಅಧಿಕಾರಿಗಳು ನಮ್ಮ ಮಾತನ್ನು ಕೇಳುತ್ತಾರೆ ಎಂಬ ಭರವಸೆ ಇತ್ತು. ಆದರೆ, ಅಧಿಕಾರಿಗಳು ಸಮಸ್ಯೆಗಳನ್ನು ಆಲಿಸದ ಹಿನ್ನೆಲೆಯಲ್ಲಿ ನಾವು ಸತ್ಯಾಗ್ರಹ ನಡೆಸಲು ತೀರ್ಮಾನ ಕೈಗೊಂಡೆವು ಎಂದು ಪ್ರತಿಭಟನಾನಿರತ ವಿದ್ಯಾರ್ಥಿನಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತರ ಕುಟುಂಬಗಳಿಗೆ ಸೂಕ್ತ ಪರಿಹಾರ, ಎಫ್‌ಐಆರ್ ದಾಖಲಾದ ವಿವರಗಳು, ನಿರ್ದಿಷ್ಟ ಸಮಯದೊಳಗೆ ಸಮಿತಿಯ ವರದಿ ಸಲ್ಲಿಕೆ ಸೇರಿದಂತೆ ಕೋಚಿಂಗ್‌ ಸೆಂಟರ್‌ಗಳಿಗೆ ನೆಲಮಾಳಿಗೆ ಬಳಸುವುದನ್ನು ನಿಷೇಧಿಸಬೇಕು ಎಂದು ಮತ್ತೊಬ್ಬ ಪ್ರತಿಭಟನಾನಿರತ ವಿದ್ಯಾರ್ಥಿ ಹೇಳಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆ ವಿದ್ಯಾರ್ಥಿಗಳ ನಿಯೋಗವು ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರನ್ನೂ ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದೆ.

ಕೋಚಿಂಗ್‌ ಸೆಂಟರ್‌ನ ನೆಲಮಾಳಿಗೆಗೆ ಮಳೆನೀರು ನುಗ್ಗಿ ಮೂವರು ಐಎಎಸ್‌ ಆಕಾಂಕ್ಷಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಘಟನೆ ಬಗ್ಗೆ ಸಮಗ್ರ ತನಿಖೆಗೆ ಗೃಹ ಸಚಿವಾಲಯವು ಸಮಿತಿ ನೇಮಕ ಮಾಡಿದೆ.

‘ಅಕ್ರಮ’ವಾಗಿ ನಡೆಸುತ್ತಿದ್ದ ಕೋಚಿಂಗ್‌ ಸೆಂಟರ್‌ಗಳ ವಿರುದ್ಧ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಕ್ರಮ ಕೈಗೊಂಡಿದ್ದು, ಇಂತಹ 13 ಸೆಂಟರ್‌ಗಳಿಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.