ADVERTISEMENT

ದೆಹಲಿ ಕೋಚಿಂಗ್ ಸೆಂಟರ್‌ ದುರಂತ: ಮತ್ತೆ ಐವರ ಬಂಧನ

ಪಿಟಿಐ
Published 29 ಜುಲೈ 2024, 6:20 IST
Last Updated 29 ಜುಲೈ 2024, 6:20 IST
<div class="paragraphs"><p>'ರಾವ್ಸ್ ಐಎಎಸ್‌ ಸ್ಟಡಿ ಸರ್ಕಲ್‌' ತರಬೇತಿ ಕೇಂದ್ರದ ಎದುರಿನ ರಸ್ತೆಯಲ್ಲಿ ಮಳೆ ನೀರು ನಿಂತಿರುವುದು. ದುರಂತದ ಬಳಿಕ ಪೊಲೀಸರನ್ನು ನಿಯೋಜಿಸಲಾಗಿದೆ.</p></div>

'ರಾವ್ಸ್ ಐಎಎಸ್‌ ಸ್ಟಡಿ ಸರ್ಕಲ್‌' ತರಬೇತಿ ಕೇಂದ್ರದ ಎದುರಿನ ರಸ್ತೆಯಲ್ಲಿ ಮಳೆ ನೀರು ನಿಂತಿರುವುದು. ದುರಂತದ ಬಳಿಕ ಪೊಲೀಸರನ್ನು ನಿಯೋಜಿಸಲಾಗಿದೆ.

   

ಪಿಟಿಐ ಚಿತ್ರ

ನವದೆಹಲಿ: ಕೋಚಿಂಗ್‌ ಸೆಂಟರ್‌ನ ನೆಲಮಹಡಿಗೆ ಮಳೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ನೆಲಮಹಡಿಯ ಮಾಲೀಕ ಹಾಗೂ ಇತರ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಇದರೊಂದಿಗೆ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ದೆಹಲಿಯ ಓಲ್ಡ್‌ ರಾಜೇಂದ್ರ ನಗರದಲ್ಲಿರುವ 'ರಾವ್ಸ್ ಐಎಎಸ್‌ ಸ್ಟಡಿ ಸರ್ಕಲ್‌' ತರಬೇತಿ ಕೇಂದ್ರದ ಮಾಲೀಕ ಹಾಗೂ ನಿರ್ವಾಹಕರನ್ನು ಭಾನುವಾರ ಬಂಧಿಸಲಾಗಿತ್ತು.

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸ್‌ ಆಯುಕ್ತ (ಕೇಂದ್ರ) ಎಂ. ಹರ್ಷ ವರ್ಧನ್‌, ಕಟ್ಟಡಲ್ಲಿರುವ ಪ್ರತಿ ಮಹಡಿಗೂ ಬೇರೆ ಬೇರೆ ಮಾಲೀಕರಿದ್ದಾರೆ ಎಂದಿದ್ದಾರೆ.

'ರಾಜೇಂದ್ರ ನಗರದಲ್ಲಿ ವರದಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಐದು ಮಂದಿಯನ್ನು ಬಂಧಿಸಲಾಗಿದೆ. ಕಟ್ಟಡದ ನೆಲಮಹಡಿಯ ಮಾಲೀಕ ಹಾಗೂ ಕಟ್ಟಡದ ಗೇಟ್‌ಗೆ ಹಾನಿಯಾಗುವಂತೆ ವಾಹನ ಚಾಲನೆ ಮಾಡಿ, ನೆಲ ಮಹಡಿಗೆ ನೀರು ನುಗ್ಗಲು ಕಾರಣವಾದ ವ್ಯಕ್ತಿಯೂ ಬಂಧಿತರ ಪಟ್ಟಿಯಲ್ಲಿದ್ದಾರೆ' ಎಂದು ತಿಳಿಸಿದ್ದಾರೆ.

ದುರಂತಕ್ಕೆ ಕಾರಣವಾದ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.