ADVERTISEMENT

ದೆಹಲಿಯ ರೋಹಿಣಿ ಕೋರ್ಟ್‌ನಲ್ಲಿ ಸ್ಫೋಟ, ಒಬ್ಬರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಡಿಸೆಂಬರ್ 2021, 9:34 IST
Last Updated 9 ಡಿಸೆಂಬರ್ 2021, 9:34 IST
ದೆಹಲಿಯ ರೋಹಿಣಿ ಕೋರ್ಟ್‌ನಲ್ಲಿ ಸ್ಫೋಟ (ಐಎಎನ್‌ಎಸ್ ಚಿತ್ರ)
ದೆಹಲಿಯ ರೋಹಿಣಿ ಕೋರ್ಟ್‌ನಲ್ಲಿ ಸ್ಫೋಟ (ಐಎಎನ್‌ಎಸ್ ಚಿತ್ರ)   

ನವದೆಹಲಿ: ರಾಷ್ಟ್ರ ರಾಜಧಾನಿಯ ರೋಹಿಣಿ ಕೋರ್ಟ್‌ನಲ್ಲಿ ಗುರುವಾರ ಬೆಳಿಗ್ಗೆ ಲಘು ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸಿಬ್ಬಂದಿಗೆ ಗಾಯವಾಗಿದೆ.

ಸ್ಫೋಟದ ಹಿನ್ನೆಲೆಯಲ್ಲಿ ರೋಹಿಣಿ ಕೋರ್ಟ್ ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಕಮಾಂಡೋಗಳು ಸ್ಥಳಕ್ಕೆ ತಲುಪಿದ್ದಾರೆ. ಸ್ಫೋಟದ ಸ್ವರೂಪವನ್ನು ಪರೀಶೀಲಿಸಲು ಹಾಗೂ ಪುರಾವೆಗಳನ್ನು ಕಲೆ ಹಾಕಲು ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ಧಾವಿಸಿದೆ.

ADVERTISEMENT

ಸ್ಫೋಟ ಹೇಗೆ ಸಂಭವಿಸಿತು?
ರೋಹಿಣಿ ಕೋರ್ಟ್‌ನ ಚೇಂಬರ್ ಸಂಖ್ಯೆ 102ರಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಕಾರಣ ಇನ್ನೂ ತಿಳಿದು ಬಂದಿಲ್ಲ. ಲ್ಯಾಪ್‌ಟಾಪ್ ಬ್ಯಾಟರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.