ADVERTISEMENT

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು, ಪುತ್ರರಿಗೆ ಜಾಮೀನು ನೀಡಿದ ದೆಹಲಿ ಕೋರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಅಕ್ಟೋಬರ್ 2024, 5:54 IST
Last Updated 7 ಅಕ್ಟೋಬರ್ 2024, 5:54 IST
<div class="paragraphs"><p>ತೇಜ್‌ ಪ್ರತಾಪ್‌ ಯಾದವ್‌, ಲಾಲೂ ಪ್ರಸಾದ್‌ ಹಾಗೂ ತೇಜಸ್ವಿ ಯಾದವ್‌ </p></div>

ತೇಜ್‌ ಪ್ರತಾಪ್‌ ಯಾದವ್‌, ಲಾಲೂ ಪ್ರಸಾದ್‌ ಹಾಗೂ ತೇಜಸ್ವಿ ಯಾದವ್‌

   

ಪಿಟಿಐ ಚಿತ್ರ

ನವದೆಹಲಿ: ಆರ್‌ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್‌ ಹಾಗೂ ಅವರ ಮಕ್ಕಳಾದ ತೇಜಸ್ವಿ ಯಾದವ್‌, ತೇಜ್‌ ಪ್ರತಾಪ್‌ ಯಾದವ್‌ ಅವರಿಗೆ ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

ADVERTISEMENT

ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್‌ ಮಾಡಿದೆ.

ರೈಲ್ವೆ ಇಲಾಖೆಯಲ್ಲಿನ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಸಂಬಂಧ ಆರ್‌ಜೆಡಿ ನಾಯಕರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ತಲಾ ₹ 1 ಲಕ್ಷ ಮೊತ್ತದ ಬಾಂಡ್‌ ನೀಡುವಂತೆ ಸೂಚಿಸಿ ಜಾಮೀನು ನೀಡಿರುವ ನ್ಯಾಯಾಲಯ, ವಿಚಾರಣೆಯನ್ನು ಇದೇ ತಿಂಗಳ 25ಕ್ಕೆ ಮುಂದೂಡಿದೆ.

ಬಳಿಕ ಮಾತನಾಡಿರುವ ತೇಜಸ್ವಿ, 'ರಾಜಕೀಯ ಪಿತೂರಿ ನಡೆಸಲಾಗುತ್ತಿದೆ. ತನಿಖಾ ಸಂಸ್ಥೆಗಳನ್ನು ದರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ನಮಗೆ ಜಯ ಸಿಗುವುದು ನಿಶ್ಚಿತ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.