ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾದ ಪ್ರಕರಣದಲ್ಲಿ ಡಬ್ಲೂಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ದೋಷಾರೋಪಣೆ ಹೊರಿಸಿ ದೆಹಲಿ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.
ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ಪ್ರಿಯಾಂಕಾ ರಜ್‌ಪೂತ್ ಅವರು ಆರು ಮಹಿಳಾ ಕುಸ್ತಿಪಟುಗಳಲ್ಲಿ ಒಬ್ಬರು ಸಲ್ಲಿಸಿದ ದೂರಿನಲ್ಲಿ ಬ್ರಿಜ್‌ಭೂಷಣ್ ಅವರ ಹೆಸರನ್ನು ಕೈಬಿಟ್ಟಿದ್ದರು.
ಬ್ರಿಜ್‌ಭೂಷಣ್ ಶರಣ್ ಸಿಂಗ್ ಮಾತ್ರವಲ್ಲದೆ, ಮತ್ತೊಬ್ಬ ಆರೋಪಿಯಾಗಿರುವ ಡಬ್ಲ್ಯೂಎಫ್‌ಐನ ಮಾಜಿ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ವಿರುದ್ಧವೂ ದೋಷಾರೋಪಣೆ ಹೊರಿಸಿದೆ.
ಬ್ರಿಜ್‌ಭೂಷಣ್ ವಿರುದ್ಧ ದೆಹಲಿ ಪೊಲೀಸರು ಜೂನ್ 15 ರಂದು ಲೈಂಗಿಕ ಆರೋಪ ಪ್ರಕರಣದಲ್ಲಿ ಚಾರ್ಜ್‌ಶೀಟ್ ಅನ್ನು 354, 354A, 354D ಮತ್ತು ಭಾರತೀಯ ದಂಡ ಸಂಹಿತೆಯ 506 ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್‌ಭೂಷಣ್‌ಗೆ ದೆಹಲಿ ಕೋರ್ಟ್ ಸಮನ್ಸ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.