ADVERTISEMENT

ಅಬಕಾರಿ ಹಗರಣ: ಕೇಜ್ರಿವಾಲ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ದೆಹಲಿ ನ್ಯಾಯಾಲಯ

ಪಿಟಿಐ
Published 20 ಜೂನ್ 2024, 9:10 IST
Last Updated 20 ಜೂನ್ 2024, 9:10 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

(ಪಿಟಿಐ ಚಿತ್ರ)

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಆದೇಶವನ್ನು ದೆಹಲಿ ನ್ಯಾಯಾಲಯ ಗುರುವಾರ ಕಾಯ್ದಿರಿಸಿದೆ.

ADVERTISEMENT

ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಅರ್ಜಿಯ ಕುರಿತು ಆರೋಪಿ ಮತ್ತು ಜಾರಿ ನಿರ್ದೇಶನಾಲಯದ (ಇ.ಡಿ) ವಾದ ಹಾಗೂ ಪ್ರತಿವಾದ ಆಲಿಸಿದ ನಂತರ ಆದೇಶವನ್ನು ಕಾಯ್ದಿರಿಸಿದ್ದಾರೆ.

ಪ್ರಕರಣದಲ್ಲಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 3 ರವರೆಗೆ ವಿಸ್ತರಿಸಿ ನ್ಯಾಯಾಲಯ ಬುಧವಾರ ಆದೇಶಿಸಿತ್ತು. ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದಿದ್ದರಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರು , ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.