ADVERTISEMENT

ದಟ್ಟ ಮಂಜಿನಲ್ಲಿ ಸೇರಿಕೊಂಡ ವಿಷಕಾರಿ ಧೂಳು: ದೆಹಲಿಯಲ್ಲಿ ವಾಯು ಗುಣಮಟ್ಟ ಕಳಪೆ

ಪಿಟಿಐ
Published 5 ನವೆಂಬರ್ 2024, 6:24 IST
Last Updated 5 ನವೆಂಬರ್ 2024, 6:24 IST
<div class="paragraphs"><p>ದೆಹಲಿಯಲ್ಲಿ ವಾಯು ಮಾಲಿನ್ಯ</p></div>

ದೆಹಲಿಯಲ್ಲಿ ವಾಯು ಮಾಲಿನ್ಯ

   

–ಪಿಟಿಐ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾತಾವರಣವು ಮತ್ತಷ್ಟು ಹದಗೆಟ್ಟಿದ್ದು, ಅತ್ಯಂತ ಕಳಪೆ ವಾಯು ಗುಣಮಟ್ಟ ಹೊಂದಿದೆ ಎಂದು ವರದಿಯಾಗಿದೆ.

ADVERTISEMENT

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (ಸಿಪಿಸಿಬಿ) ಅಂಕಿಅಂಶಗಳ ಪ್ರಕಾರ ವಾಯು ಗುಣಮಟ್ಟ ಸೂಚ್ಯಂಕವು (ಎಕ್ಯೂಐ) ಬೆಳಿಗ್ಗೆ 9 ಗಂಟೆಗೆ 384ರಷ್ಟಿತ್ತು.

ಆನಂದ್ ವಿಹಾರ್, ಅಶೋಕ್ ವಿಹಾರ್, ದ್ವಾರಕಾ, ಎನ್‌ಎಸ್‌ಐಟಿ ದ್ವಾರಕಾ, ನೆಹರು ನಗರ, ಮೋತಿ ಮಾರ್ಗ, ಸೋನಿಯಾ ವಿಹಾರ್, ವಿವೇಕ್ ವಿಹಾರ್, ವಜೀರ್‌ಪುರ್, ರೋಹಿಣಿ, ಪಂಜಾಬಿ ಬಾಗ್, ಮುಂಡ್ಕಾ ಮತ್ತು ಜಹಾಂಗೀರ್‌ಪುರಿ ಪ್ರದೇಶಗಳಲ್ಲಿ ವಾಯು ಗುಣಮಟ್ಟ ಕಳಪೆ ಎಂದು ಉಲ್ಲೇಖಿಸಲಾಗಿದೆ.

ವಾಯು ಗುಣಮಟ್ಟ ಮಾಪನ ಸೂಚ್ಯಂಕದ ಅನುಸಾರ, 0 ಮತ್ತು 50 ರ ನಡುವಿನ ಎಕ್ಯೂಐ ಅನ್ನು ‘ಉತ್ತಮ’, 51 ಮತ್ತು 100 ‘ತೃಪ್ತಿದಾಯಕ’, 101 ಮತ್ತು 200 ‘ಮಧ್ಯಮ’, 201 ಮತ್ತು 300 ‘ಕಳಪೆ’, 301 ಮತ್ತು 400 ‘ಅತಿ ಕಳಪೆ’, ಮತ್ತು 401 ಮತ್ತು 500 ‘ತೀವ್ರ’ ಎಂದು ಪರಿಗಣಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.