ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನ್ನನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಕ್ರಮದ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಳ್ಳಿ ಹಾಕಿದೆ.
‘ಅರವಿಂದ ಕೇಜ್ರಿವಾಲ್ ಅವರ ಬಂಧನವು ಕಾನೂನು ನಿಬಂಧನೆಗಳಿಗೆ ವಿರುದ್ಧವಾಗಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಡುತ್ತದೆ. ಹೀಗಾಗಿ ಅವರ ರಿಮಾಂಡ್ ಅನ್ನು ಕಾನೂನುಬಾಹಿರವೆಂದು ಪರಿಗಣಿಸಲು ಸಾಧ್ಯವಿಲ್ಲ’ ಎಂದು ತೀರ್ಪು ನೀಡುವಾಗ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಹೇಳಿದರು.
ಸದ್ಯ ಪ್ರಕರಣ ಸಂಬಂಧ ಕೇಜ್ರಿವಾಲ್ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಾರ್ಚ್ 21ರಂದು ಅವರನ್ನು ಇ.ಡಿ ಬಂಧಿಸಿತ್ತು. ಏಪ್ರಿಲ್ 1ರಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.