ನವದೆಹಲಿ: ದೆಹಲಿಯ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ.2ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಪಿಎಂಎಲ್‌ಎ ಕಾಯ್ದೆಯಡಿ 55 ವರ್ಷದ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಲಾಗಿದೆ. ತನಿಖಾ ಸಂಸ್ಥೆಯು ಅಂದು ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದೆ ಎಂದು ಇ.ಡಿ ಮೂಲಗಳು ತಿಳಿಸಿವೆ.
ಪ್ರಕರಣದ ಆರೋಪಪಟ್ಟಿಯಲ್ಲೂ ತನಿಖಾ ಸಂಸ್ಥೆ ಕೇಜ್ರಿವಾಲ್ ಅವರ ಹೆಸರನ್ನು ಉಲ್ಲೇಖಿಸಿದೆ. ಎಎಪಿ ನಾಯಕರಾದ ಇವರ ಜೊತೆಗೆ ಪ್ರಕರಣದ ಆರೋಪಿಗಳು ಸಂಪರ್ಕದಲ್ಲಿದ್ದರು ಎಂದು ಆರೋಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.