ದೇಶದ್ರೋಹ ಪ್ರಕರಣದಲ್ಲಿ ಜೆಎನ್‌ಯುನ ಮಾಜಿ ವಿದ್ಯಾರ್ಥಿ ನಾಯಕ ಕನ್ಹಯ್ಯಾ ಕುಮಾರ್ ಅವರ ವಿಚಾರಣೆ ನಡೆಸಲು ದೆಹಲಿ ಸರ್ಕಾರ ಅನುಮತಿ ನೀಡಿದೆ.
2016ರಲ್ಲಿ ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅಫ್ಜಲ್ ಗುರು ಸಾವಿನ ಸ್ಮರಣಾರ್ಥ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರಾಷ್ಟ್ರವಿರೋಧಿ ಘೋಷಣೆಗಳನ್ನು ಕೂಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಕನ್ಹಯ್ಯ ಕುಮಾರ್ ಮತ್ತು ಉಮರ್ ಖಾಲಿದ್ ಮೇಲೆ ರಾಜದ್ರೋಹ ಪ್ರಕರಣ ದಾಖಲಿಸಲಾಗಿತ್ತು.
2019ರ ಜನೆವರಿಯಲ್ಲಿ ಕನ್ಹಯ್ಯ ಕುಮಾರ್ ವಿಚಾರಣೆಗೆ ಅವಕಾಶ ಕೋರಿ ಪೊಲೀಸರು ದೆಹಲಿ ರಾಜ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದರು. ಪೊಲೀಸರ ಮನವಿ ಪತ್ರಕ್ಕೆ ಎಎಪಿ ಸರ್ಕಾರ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿರಲಿಲ್ಲ.
ಏಪ್ರಿಲ್ 3 ರೊಳಗೆ ಪ್ರಕರಣದ ಚಾರ್ಚ್ ಸೀಟ್ ಸಲ್ಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ತಾಕೀತು ಮಾಡಿದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.