ADVERTISEMENT

ದೆಹಲಿ: ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಿಸುವ ಕುರಿತು ಸಮಿತಿ ರಚನೆ

ಪಿಟಿಐ
Published 11 ಜುಲೈ 2024, 2:42 IST
Last Updated 11 ಜುಲೈ 2024, 2:42 IST
   

ನವದೆಹಲಿ: ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಕುರಿತು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲು ದೆಹಲಿ ಸರ್ಕಾರದ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಈ ಸಮಿತಿಯನ್ನು ರಚಿಸುವ ನಿರ್ಧಾರಕ್ಕೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರ ಪೂರ್ವಾನುಮತಿ ಪಡೆದಿದೆ ಎಂದು ಇಲಾಖೆ ಹೇಳಿದೆ.

ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಇಲಾಖೆ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿಯ ವಯಸ್ಸನ್ನು 65 ವರ್ಷದಿಂದ 70 ವರ್ಷಕ್ಕೆ ಹೆಚ್ಚಿಸುವ ಕುರಿತು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

ADVERTISEMENT

ಪ್ರಧಾನ ಕಾರ್ಯದರ್ಶಿ ನೇತೃತ್ವದ ಈ ಸಮಿತಿಯು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯದರ್ಶಿ, ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ ನಿರ್ದೇಶಕರು, ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ಡೀನ್‌ ಮತ್ತು ಲೋಕನಾಯಕ ಆಸ್ಪತ್ರೆಯ ಎಂ.ಡಿ ಸೇರಿದಂತೆ ಇತರರನ್ನು ಒಳಗೊಂಡಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.