ನವದೆಹಲಿ: ಮಲದ ಗುಂಡಿ ಸ್ಚಚ್ಛಗೊಳಿಸುವ ವೇಳೆ ಮೃತಪಟ್ಟ ಸಫಾಯಿ ಕರ್ಮಚಾರಿಯೊಬ್ಬರ ಪತ್ನಿಗೆ ₹30 ಲಕ್ಷ ಪರಿಹಾರ ನೀಡಬೇಕು ಎಂದು ದೆಹಲಿ ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ಆದೇಶಿಸಿದೆ.
ಕರ್ತವ್ಯದ ವೇಳೆ ಮೃತಪಟ್ಟ ಸಫಾಯಿ ಕರ್ಮಚಾರಿ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು ₹10 ಲಕ್ಷದಿಂದ ₹30 ಲಕ್ಷಕ್ಕೆ ಏರಿಸಬೇಕು ಎಂದು ಸುಪ್ರೀಂ ಕೋರ್ಟ್ ಈಚೆಗಷ್ಟೇ ಆದೇಶ ಹೊರಡಿಸಿತ್ತು.
ಅದರಂತೆ ತಮಗೆ ನೀಡಲಾಗಿರುವ ಪರಿಹಾರ ಮೊತ್ತವನ್ನು ₹10 ಲಕ್ಷದಿಂದ ₹30 ಲಕ್ಷಕ್ಕೆ ಏರಿಸಬೇಕು ಎಂದು ಮಹಿಳೆಯು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಸುಬ್ರಮಣಿಯಮ್ ಪ್ರಸಾದ್ ಅವರು ₹30 ಲಕ್ಷ ಪರಿಹಾರ ನೀಡುವಂತೆ ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಿದರು ಮತ್ತು ಎರಡು ತಿಂಗಳ ಒಳಗೆ ಈ ಆದೇಶ ಜಾರಿಗೊಳಿಸಲು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.