ADVERTISEMENT

ನ್ಯೂಸ್‌ ಕ್ಲಿಕ್‌: ಅಭಿಪ್ರಾಯ ಕೇಳಿದ ದೆಹಲಿ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2023, 14:33 IST
Last Updated 11 ಆಗಸ್ಟ್ 2023, 14:33 IST
   

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಲವಂತದ ಕ್ರಮ ಕೈಗೊಳ್ಳದಂತೆ ಈ ಹಿಂದೆ ದೆಹಲಿ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ  ಅರ್ಜಿಗೆ ಸಂಬಂಧಿಸಿದಂತೆ, ‘ನ್ಯೂಸ್‌ ಕ್ಲಿಕ್‌’ ಸುದ್ದಿ ಸಂಸ್ಥೆ ಮತ್ತು ಅದರ ಪ್ರಧಾನ ಸಂಪಾದಕರ ಪ್ರತಿಕ್ರಿಯೆಯನ್ನು ಹೈಕೋರ್ಟ್‌ ಶುಕ್ರವಾರ ಕೇಳಿದೆ.

ಈ ಸಂಬಂಧ ಸುದ್ದಿಸಂಸ್ಥೆ ಮತ್ತು ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರಿಗೆ ನೋಟಿಸ್‌ ನೀಡಲಾಗಿದೆ.

ಅರ್ಜಿ ವಿಚಾರಣೆ ವೇಳೆ ಇ.ಡಿ, ‘ತನಿಖೆ ಸಂದರ್ಭದಲ್ಲಿ ‘ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಆದೇಶ ನೀಡುವುದು ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಿದ್ದಕ್ಕೆ ಸಮ’ ಎಂದು ವಾದಿಸಿತು.  ನಂತರ ‘ಈ ವಿಚಾರವಾಗಿ ಆಲೋಚಿಸುವ ಅಗತ್ಯ ಇದೆ’ ಎಂದು ನ್ಯಾಯಮೂರ್ತಿ ಸೌರಭ್‌ ಬ್ಯಾನರ್ಜಿ ಅಭಿಪ್ರಾಯಪಟ್ಟರು.

ADVERTISEMENT

ನಂತರ ಅರ್ಜಿ ವಿಚಾರಣೆಯನ್ನು ಸೆ.6ಕ್ಕೆ ಮುಂದೂಡಿದರು.

ಚೀನಾ ಸರ್ಕಾರ ನಡೆಸುವ ಮಾಧ್ಯಮ ಸಂಸ್ಥೆಗಳ ಜೊತೆ ಸಹಯೋಗ ಹೊಂದಿರುವ ಅಮೆರಿಕದ ಉದ್ಯಮಿ ನೆವಿಲ್ಲೆ ರಾಯ್‌ ಸಿಂಘಮ್‌ ಅವರು ನ್ಯೂಸ್‌ಕ್ಲಿಕ್‌ ವೆಬ್‌ ಪೋರ್ಟಲ್‌ಗೆ ಹಣ ಹೂಡುತ್ತಿದ್ದಾರೆ ಎಂದು ಈಚೆಗೆ ನ್ಯಾಯಾರ್ಕ್‌ ಟೈಮ್ಸ್‌ ವರದಿ ಮಾಡಿತ್ತು. ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿ ಪೋರ್ಟಲ್‌ನ ಸಂಪಾದಕ ಮತ್ತು ಪ್ರವರ್ತಕರ ಮೇಲೆ ಜಾರಿ ನಿರ್ದೇಶನಾಲಯವು 2021ರಲ್ಲಿ ದಾಳಿ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.