ADVERTISEMENT

ಜಾಮಿಯಾ ವಿವಿ ಗಲಭೆ ಪ್ರಕರಣ: ಪೊಲೀಸರಿಗೆ ದೆಹಲಿ ಹೈಕೋರ್ಟ್ ನೋಟಿಸ್

ಏಜೆನ್ಸೀಸ್
Published 27 ಫೆಬ್ರುವರಿ 2020, 9:05 IST
Last Updated 27 ಫೆಬ್ರುವರಿ 2020, 9:05 IST
ಜಾಮಿಯಾ ವಿವಿ ಗಲಭೆ ಪ್ರಕರಣ ದೆಹಲಿ ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್
ಜಾಮಿಯಾ ವಿವಿ ಗಲಭೆ ಪ್ರಕರಣ ದೆಹಲಿ ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್   

ನವದೆಹಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆವರಣದೊಳಗೆ ನಡೆದ ಗಲಭೆ ಪ್ರಕರಣ ಸಂಬಂಧ ದೆಹಲಿ ಹೈಕೋರ್ಟ್ ಪೊಲೀಸರು ಹಾಗೂ ದೆಹಲಿ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ವಿದ್ಯಾರ್ಥಿ ಮಹಮದ್ ಮುಸ್ತಫಾ ಈ ಸಂಬಂಧ ಹೈಕೋರ್ಟ್‌‌ಗೆ ಅರ್ಜಿ ಸಲ್ಲಿಸಿದ್ದು, ವಿದ್ಯಾರ್ಥಿಗಳ ಮೇಲೆ ಹಲ್ಲೆ ಪೊಲೀಸರು ಹಲ್ಲೆ ನಡೆಸಿದ್ದು, ಘಟನೆಯಲ್ಲಿಪರಿಹಾರವಾಗಿ ₹1 ಕೋಟಿ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.2019ರ ಡಿಸೆಂಬರ್ 15ರಂದು ಘಟನೆ ನಡೆದಿದ್ದು, ಪ್ರತಿಭಟನೆ ವೇಳೆ ಹಲವು ವಾಹನಗಳು ಬೆಂಕಿಗೆ ಅಹುತಿಯಾಗಿದ್ದವು. ಕೆಲ ವಿದ್ಯಾರ್ಥಿಗಳ ಮೇಲೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಗುರುವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.