ADVERTISEMENT

CAA | ದೆಹಲಿ ಕಾಂಗ್ರೆಸ್ ಕಚೇರಿ ಮುಂದೆ ಹಿಂದೂ, ಸಿಖ್ ನಿರಾಶ್ರಿತರ ಪ್ರತಿಭಟನೆ

ಪಿಟಿಐ
Published 15 ಮಾರ್ಚ್ 2024, 10:51 IST
Last Updated 15 ಮಾರ್ಚ್ 2024, 10:51 IST
<div class="paragraphs"><p>ಪ್ರತಿಭಟನೆಯಲ್ಲಿ ಪಾಸ್‌ಪೋರ್ಟ್ ಹಾಗೂ ದಾಖಲೆಗಳನ್ನು ಪ್ರದರ್ಶಿಸಿದ ವ್ಯಕ್ತಿ</p></div>

ಪ್ರತಿಭಟನೆಯಲ್ಲಿ ಪಾಸ್‌ಪೋರ್ಟ್ ಹಾಗೂ ದಾಖಲೆಗಳನ್ನು ಪ್ರದರ್ಶಿಸಿದ ವ್ಯಕ್ತಿ

   

– ಪಿಟಿಐ ಚಿತ್ರ

ನವದೆಹಲಿ: ಸಿಎಎ ಕಾಯ್ದೆಯ ಬಗ್ಗೆ ಇಂಡಿಯಾ ಒಕ್ಕೂಟದ ನಾಯಕರು ನೀಡಿದ ಹೇಳಿಕೆಯನ್ನು ಖಂಡಿಸಿ, ಪಾಕಿಸ್ತಾನ ಹಾಗೂ ಅಫ್ಗಾನಿಸ್ತಾನದ ಹಿಂದೂ, ಸಿಖ್ ನಿರಾಶ್ರಿತರು ಇಲ್ಲಿನ ಕಾಂಗ್ರೆಸ್ ಮುಖ್ಯಕಚೇರಿಯ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ADVERTISEMENT

ಭಿತ್ತಿಚಿತ್ರ ಹಿಡಿದುಕೊಂಡ ಪ್ರತಿಭಟನಾಕಾರರು ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದರು.

‘ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವು ಸಿಎಎ ಜಾರಿಗೊಳಿಸಿ ನಮಗೆ ಪೌರತ್ವ ನೀಡಲು ಹೊರಟಿರುವಾಗ, ಬೇರೆ ಪಕ್ಷಗಳು ಏಕೆ ವಿರೋಧ ವ್ಯಕ್ತಪಡಿಸುತ್ತಿವೆ. ಈ ಕಾನೂನನ್ನು ವಿರೋಧಿಸುತ್ತಿರುವವರ ವಿರುದ್ಧ ನಾವು ಪ್ರತಿಭಟಿಸುತ್ತಿದ್ದೇವೆ’ ಎಂದು ಪ್ರತಿಭಟನಾಕಾರರಲ್ಲಿ ಓರ್ವರಾದ ರಂಜು ರಾಮ್ ಹೇಳಿದರು.

ಸಿಎಎ ಜಾರಿ ವಿರೋಧಿಸಿ ಹೇಳಿಕೆ ನೀಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಸಿವಿಲ್ ಲೈನ್ಸ್‌ನಲ್ಲಿರುವ ಅವರ ನಿವಾಸದ ಮುಂದೆ ಗುರುವಾರ ಹಿಂದೂ, ಸಿಖ್ ನಿರಾಶ್ರಿತರು ಪ್ರತಿಭಟನೆ ನಡೆಸಿದ್ದರು.

ಕೇಜ್ರಿವಾಲ್ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರಲ್ಲದೇ, ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.