ನವದೆಹಲಿ: ದೆಹಲಿಯಿಂದ ಕಾಬೂಲ್‌ಗೆ ಸೆ.23ರಂದು 120 ಪ್ರಯಾಣಿಕರನ್ನು ಹೊತ್ತು ಹಾರುತ್ತಿದ್ದ ಸ್ಪೈಸ್ ಜೆಟ್ ವಿಮಾನವನ್ನು ಪಾಕ್ ವಾಯುಪಡೆ ಸುತ್ತುಗಟ್ಟಿದ್ದ ಪ್ರಕರಣದ ತಡವಾಗಿ ಬೆಳಕಿಗೆ ಬಂದಿದೆ.
ಸ್ಪೈಸ್ ಜೆಟ್ ವಿಮಾನವನ್ನು ಪಾಕಿಸ್ತಾನದ ಗಡಿ ದಾಟುವವರೆಗೆಪಾಕ್ ವಾಯುಪಡೆಯ ಯುದ್ಧವಿಮಾನಗಳು ಸುತ್ತುವರಿದಿದು, ಹಿಂಬಾಲಿಸಿದ್ದವು ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಡಿಜಿಸಿಎ (ನಾಗರಿಕ ವಿಮಾನಯಾನ ಇಲಾಖೆ ನಿರ್ದೇಶಕರ ಕಚೇರಿ) ಅಧಿಕಾರಿಗಳು ಸ್ಪೈಸ್‌ಜೆಟ್ ಸಂಸ್ಥೆಯ ‘ಬೋಯಿಂಗ್ 737’ವಿಮಾನದ ಕಾಲ್‌ಸೈನ್ (ಅಡ್ಡಹೆಸರು) ಕರೆಯುವ ವಿಚಾರದಲ್ಲಿ ಆದ ಗೊಂದಲದಿಂದ ಪಾಕ್ ವಾಯುಪಡೆ ತುರ್ತಾಗಿ ತನ್ನ ಯುದ್ಧ ವಿಮಾನಗಳನ್ನು ನಿಯೋಜಿಸಿತು’ಎಂದು ಹೇಳಿದ್ದಾರೆ.
ಸ್ಪೈಸ್ ಜೆಟ್ ವಿಮಾನವನ್ನು ಸುತ್ತುಗಟ್ಟಿದೆ ಪಾಕ್ ವಾಯುಪಡೆಯ ಅತ್ಯಾಧುನಿಕ ಎಫ್–16 ಯುದ್ಧವಿಮಾನಗಳು ಹಾರಾಟದ ಎತ್ತರ ತಗ್ಗಿಸುವಂತೆ ಸೂಚಿಸಿದವು. ನಂತರ ಸ್ಪೈಸ್‌ಜೆಟ್‌ನ ಪೈಲಟ್, ಇದು ವಾಣಿಜ್ಯ ವಿಮಾನ ಎಂದು ಪಾಕ್ ವಾಯುಪೆಯ ಪೈಲಟ್‌ಗಳಿಗೆ ಸ್ಪಷ್ಟಪಡಿಸಿದರು ಎಂದು ಎಎನ್‌ಐ ವರದಿ ಮಾಡಿದೆ.
ನಂತರ ವಿಮಾನಕ್ಕೆ ಹಾರಾಟ ಮುಂದುವರಿಸಲು ಪಾಕಿಸ್ತಾನ ಅನುಮತಿ ನೀಡಿತು. ಮಾತ್ರವಲ್ಲ, ವಿಮಾನವು ಪಾಕಿಸ್ತಾನದ ಗಡಿ ದಾಟುವವರೆಗೂ ಸುತ್ತುವರಿದಿತ್ತು. ಈ ಪ್ರಕರಣದ ಬಗ್ಗೆ ಸ್ಪೈಸ್‌ಜೆಟ್ ಈವರೆಗೆ ಏನೂ ಹೇಳಿಲ್ಲ.
‘ಪ್ರತಿ ವಿಮಾನಯಾನ ಸಂಸ್ಥೆಗೂ ಒಂದು ಕೋಡ್ ಇರುತ್ತೆ. ಸ್ಪೈಸ್‌ಜೆಟ್‌ಗೆ ‘ಎಸ್‌ಜಿ’ಎನ್ನುವ ಕೋಡ್ ಇದೆ. ಇದನ್ನು ಪಾಕಿಸ್ತಾನದ ವಿಮಾನಯಾನ ನಿಯಂತ್ರಣ ಅಧಿಕಾರಿಗಳು ‘ಐಎ’ ಎಂದು ತಪ್ಪಾಗಿ ಅರ್ಥೈಸಿಕೊಂಡಿರುವ ಸಾಧ್ಯತೆ ಇದೆ. ಹೀಗಾಗಿಯೇ ಐಎ ಎನ್ನುವುದನ್ನು ಇಂಡಿಯನ್ ಏರ್‌ಫೋರ್ಸ್ ಎಂದು ತಪ್ಪಾಗಿ ಭಾವಿಸಿ ಪಾಕಿಸ್ತಾನದ ವಾಯುಪಡೆಗೆ ಸೂಚನೆ ರವಾನೆಯಾಗಿರಬಹುದು ಎನ್ನುವ ಹೆಸರು ಹೇಳಲು ಇಚ್ಛಿಸದ ಅಧಿಕಾರಿಗಳ ಹೇಳಿಕೆಯನ್ನು ಎಎನ್‌ಐ ಜಾಲತಾಣ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.