ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಕೋವಿಡ್ -19 ಪಾಸಿಟಿವ್ ಆಗಿದೆ. ಅಲ್ಪ ಪ್ರಮಾಣದ ರೋಗಲಕ್ಷಣಗಳನ್ನು ಹೊಂದಿದ್ದು, ಪ್ರತ್ಯೇಕ ವಾಸದಲ್ಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಮನೆಯಿಂದಲೇ ದೆಹಲಿಯ ಸ್ಥಿತಿ ಗತಿ ಬಗ್ಗೆ ಮೇಲ್ವಿಚಾರಣೆ ನಡೆಸುವ ಮೂಲಕ ಕಾರ್ಯನಿರ್ವಹಿಸುವುದಾಗಿ ಅವರು ಟ್ವೀಟ್ ಮಾಡಿದ್ದಾರೆ.
ಈಗ ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕಿಂತ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಹೆಚ್ಚಿನ ಅಧಿಕಾರವಿದೆ. ರಾಷ್ಟ್ರೀಯ ರಾಜಧಾನಿ ದೆಹಲಿ (ತಿದ್ದುಪಡಿ) ಕಾಯ್ದೆ–2021 ಏ. 27ರಿಂದ ಜಾರಿಗೆ ಬಂದಿದೆ. ಚುನಾಯಿತ ಸರ್ಕಾರಕ್ಕಿಂತ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್‌ಗೆ ಈ ಕಾಯ್ದೆ ಹೆಚ್ಚಿನ ಅಧಿಕಾರ ನೀಡುತ್ತದೆ.
ನಗರಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ಕೈಗೊಳ್ಳಬೇಕಾದರೆ, ಅನುಷ್ಠಾನಕ್ಕಾಗಿ ಅಲ್ಲಿನ ಸರ್ಕಾರ ಲೆಫ್ಟಿನೆಂಟ್ ಗವರ್ನರ್ ಅವರ ಅಭಿಪ್ರಾಯದಂತೆ ನಡೆಯಬೇಕಿರುವುದರಿಂದ ಕೋವಿಡ್ ಕಾಲದಲ್ಲಿ ಅವರ ಜವಾಬ್ದಾರಿ ಹೆಚ್ಚಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.