ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಸಿಬಿಐ ದಾಖಲಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ಉಜ್ಜಲ್ ಭುಯನ್ ಅವರಿದ್ದ ಪೀಠ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ₹ 10 ಲಕ್ಷ ಭದ್ರತಾ ಬಾಂಡ್ ಹಾಗೂ ಇಬ್ಬರನ್ನು ಭದ್ರತೆಯಾಗಿ ನೀಡಬೇಕು ಎಂದು ಕೋರ್ಟ್ ಸೂಚಿಸಿದೆ. ಇದರ ಜೊತೆಗೆ ಜಾಮೀನು ನೀಡುವಾಗ ಕೆಲವೊಂದು ಷರತ್ತುಗಳನ್ನು ವಿಧಿಸಿದೆ.
ಕೇಜ್ರಿವಾಲ್ ಅವರ ಜಾಮೀನು ಷರತ್ತುಗಳು ಹೀಗಿವೆ.
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ ಸಂಬಂಧ ಯಾವುದೇ ಅಂಶಗಳ ಕುರಿತು ಸಾರ್ವಜನಿಕ ಹೇಳಿಕೆ ನೀಡುವಂತಿಲ್ಲ.
ವಿನಾಯಿತಿ ಲಭಿಸದ ಹೊರತು ಕೆಳ ನ್ಯಾಯಾಲಯದ ವಿಚಾರಣೆಗೆ ಗೈರಾಗುವಂತಿಲ್ಲ.
ಮುಖ್ಯಮಂತ್ರಿ ಕಚೇರಿ ಅಥವಾ ದೆಹಲಿ ಸಚಿವಾಲಯಕ್ಕೆ ಭೇಟಿ ನೀಡುವಂತಿಲ್ಲ.
ಲೆಫ್ಟಿನೆಂಟ್ ಗವರ್ನರ್ ಅವರ ಅನುಮತಿ ದೊರೆಯದ ಹೊರತು ಯಾವುದೇ ಅಧಿಕೃತ ಕಡತಗಳಿಗೆ ಸಹಿ ಹಾಕುವಂತಿಲ್ಲ.
(ವಿವಿಧ ಏಜೆನ್ಸಿಗಳ ಮಾಹಿತಿ ಆಧರಿಸಿ ಬರೆದ ಸುದ್ದಿ)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.