ADVERTISEMENT

10 ಸಾವಿರ ಮಂದಿಯ ಮತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೆಹಲಿ ಸಚಿವ ರಾಜೀನಾಮೆ 

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2022, 13:10 IST
Last Updated 9 ಅಕ್ಟೋಬರ್ 2022, 13:10 IST
ರಾಜೇಂದ್ರ ಪಾಲ್ ಗೌತಮ್
ರಾಜೇಂದ್ರ ಪಾಲ್ ಗೌತಮ್    

ನವದೆಹಲಿ: ದೆಹಲಿ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ಅರವಿಂದ್ ಕೇಜ್ರಿವಾಲ್ ಸಂಪುಟಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ.

10,000 ಮಂದಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಸಮಾರಂಭದಲ್ಲಿ ಪಾಲ್ಗೊಂಡು, ಭಾಷಣ ಮಾಡಿದ್ದ ಗೌತಮ್‌ ಅವರ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು.

‘ಬ್ರಹ್ಮ, ವಿಷ್ಣು, ಶಿವ, ರಾಮ, ಶ್ರೀ ಕೃಷ್ಣ, ಗೌರಿ ಮತ್ತು ಗಣಪತಿ ಅಥವಾ ಯಾವುದೇ ಹಿಂದೂ ದೇವರುಗಳ ಪೂಜೆಯನ್ನು ಮಾಡುವುದಿಲ್ಲ’ ಎಂದು ರಾಜೇಂದ್ರ ಪಾಲ್‌ ಗೌತಮ್‌ ಅವರು ಕಾರ್ಯಕ್ರಮದಲ್ಲಿ ಹೇಳಿದ್ದರು. ವಿರೋಧ ಪಕ್ಷ ಬಿಜೆಪಿಯು ಈ ಕಾರ್ಯಕ್ರಮವನ್ನು ಟೀಕಿಸಿತ್ತು. ಎಎಪಿಗೆ ಹಿಂದೂಗಳೆಂದರೆ ಆಗದು ಎಂದು ಬಿಜೆಪಿ ಆರೋಪಿಸಿತ್ತು.

ADVERTISEMENT

ಇದಾದ ಕೆಲವೇ ದಿನಗಳಲ್ಲಿ ಗೌತಮ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಮಾರಂಭದಲ್ಲಿ ಬಿಆರ್ ಅಂಬೇಡ್ಕರ್ ಅವರ 22 ಪ್ರತಿಜ್ಞೆಗಳನ್ನು ಸ್ವೀಕರಿಸಿದ ಜನ, ಹಿಂದೂ ದೇವರು ಮತ್ತು ದೇವತೆಗಳನ್ನು ಪ್ರಾರ್ಥಿಸುವುದಿಲ್ಲ ಎಂದು ಪ್ರಮಾಣ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.