ನವದೆಹಲಿ: ದೆಹಲಿಯಲ್ಲಿ ನಿನ್ನೆ ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 200 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಬಳಿಕ ಅವರನ್ನು ಬಂಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೈತರ ಟ್ರ್ಯಾಕ್ಟರ್ ಪೆರೇಡ್ ವೇಳೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಇದುವರೆಗೆ 22 ಎಫ್ಐಆರ್ ದಾಖಲಾಗಿದ್ದು, ಘಟನೆಯಲ್ಲಿ 300ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.
ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ದೆಹಲಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿಗೆ ಕರೆ ನೀಡಿತ್ತು. ಒಂದು ದಿನದ ಮುನ್ನವೇ ರ‍್ಯಾಲಿಗೆ ಮಾರ್ಗ ನಿಗದಿ ಮಾಡಿ ದೆಹಲಿ ಪೊಲೀಸರು ಮತ್ತು ರೈತರು ಒಪ್ಪಂದಕ್ಕೆ ಬಂದಿದ್ದರು. ಆದರೆ, ಒಪ್ಪಂದ ಮೀರಿ ಪ್ರತಿಭಟನಾಕಾರರು ಅನ್ಯ ಮಾರ್ಗದ ಮೂಲಕ ದೆಹಲಿಗೆ ಪ್ರವೇಶಿಸಿದ್ದರು.
ಇದನ್ನೂ ಓದಿ..Explainer: ದೆಹಲಿಯಲ್ಲಿ ಹಿಂಸೆಗೆ ತಿರುಗಿದ 60 ದಿನಗಳ ಶಾಂತಿಯುತ ರೈತ ಹೋರಾಟ
10 ಸಾವಿರಕ್ಕೂ ಅಧಿಕ ಪ್ರತಿಭಟನಾಕಾರರು ಬ್ಯಾರಿಕೇಡ್ ಮುರಿದು, ಬಸ್‌ಗಳನ್ನು ಜಖಂಗೊಳಿಸಿ, ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಕೆಂಪುಕೋಟೆ ಪ್ರದೇಶಕ್ಕೆ ನುಗ್ಗಿ ದಾಂಧಲೆ ಮಾಡಿ ಅನ್ಯ ಧ್ವಜಾರೋಹಣ ಮಾಡಿದ್ದರು.
ಇವುಗಳನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.