ADVERTISEMENT

ಬಿಷ್ಣೋಯಿ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್‌ ಹತ್ಯೆ ಆರೋಪಿ: ವರದಿ

ಪಿಟಿಐ
Published 16 ನವೆಂಬರ್ 2024, 5:02 IST
Last Updated 16 ನವೆಂಬರ್ 2024, 5:02 IST
   

ನವದೆಹಲಿ: ಶ್ರದ್ಧಾ ವಾಲ್ಕರ್‌ ಹತ್ಯೆ ಆರೋಪಿ ಅಫ್ತಾಬ್‌ ಅಮೀನ್‌ ಪೂನಾವಾಲ, ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಹಿಟ್ ಲಿಸ್ಟ್‌ನಲ್ಲಿದ್ದಾನೆ ಎಂದು ವರದಿಯಾಗಿದೆ.

ಇತ್ತೀಚಿಗೆ ಹತ್ಯೆಯಾದ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಅವರ ಪ್ರಕರಣದ ತನಿಖೆ ನಡೆಸುತ್ತಿದ್ದ ಸಮಯದಲ್ಲಿ ಈ ವಿಚಾರ ಬಹಿರಂಗವಾಗಿದೆ. ಸಿದ್ದೀಕಿ ಹತ್ಯೆ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳಲ್ಲಿ ಒಬ್ಬ ಈ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂದು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

2022ರ ಮೇ 18ರಂದು ಅಫ್ತಾಬ್‌ ಅಮೀನ್‌ ಪೂನಾವಾಲ ತನ್ನ ಸಹಜೀವನ ಸಂಗಾತಿ ಶ್ರದ್ಧಾರನ್ನು ಕೊಲೆ ಮಾಡಿ 35 ತುಂಡುಗಳನ್ನಾಗಿ ಮಾಡಿ ಫ್ರಿಡ್ಜ್‌ನಲ್ಲಿ ಇಟ್ಟಿದ್ದ. ಬಳಿಕ 18 ದಿನಗಳ ಅಂತರದಲ್ಲಿ ಆತ ದೇಹದ ಭಾಗಗಳನ್ನು ದೆಹಲಿಯ ಮೆಹ್ರೌಲಿಯ ಕಾಡುಗಳಲ್ಲಿ ಎಸೆದಿದ್ದ. ನವೆಂಬರ್‌ 12ರಂದು ಆತತನ್ನು ಬಂಧಿಸಲಾಗಿದ್ದು, ತಿಹಾರ್‌ ಜೈಲಿನಲ್ಲಿ ಇರಿಸಲಾಗಿದೆ.

ADVERTISEMENT

'ಬಿಷ್ಣೋಯಿ ಗ್ಯಾಂಗ್‌ನಿಂದ ಪೂನಾವಾಲಾಗೆ ಬೆದರಿಕೆಯ ಕುರಿತು ನಮಗೆ ಪೊಲೀಸರು ಅಥವಾ ಭದ್ರತಾ ಏಜೆನ್ಸಿಗಳಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಸೂಚನೆ ಬಂದರೆ ಪೂನಾವಾಲಾಗೆ ಹೆಚ್ಚಿನ ಭದ್ರತೆ ಒದಗಿಸಲಾಗುವುದು' ಎಂದು ತಿಹಾರ್ ಜೈಲಿನ ಅಧಿಕೃತ ಮೂಲಗಳು ತಿಳಿಸಿವೆ.

ಅಕ್ಟೋಬರ್ 12ರಂದು ಮುಂಬೈನ ಬಾಂದ್ರಾ ಪ್ರದೇಶದ ನಿರ್ಮಲ್ ನಗರದಲ್ಲಿರುವ ಶಾಸಕ ಜೀಶನ್ ಸಿದ್ದೀಕಿ ಅವರ ಕಚೇರಿ ಬಳಿ ಬಾಬಾ ಸಿದ್ದೀಕಿ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಬಿಷ್ಣೋಯಿ ಗ್ಯಾಂಗ್ ಸದಸ್ಯರು ಈ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದರು.

ಲಾರೆನ್ಸ್ ಬಿಷ್ಣೋಯಿ ಪ್ರಸ್ತುತ ಗುಜರಾತ್‌ನ ಸಬರಮತಿ ಜೈಲಿನಲ್ಲಿದ್ದು, ಆತನ ಹಲವು ಸಹಚರರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.