ADVERTISEMENT

Delhi rains | ದೆಹಲಿಯ ಹಲವು ಭಾಗಗಳಲ್ಲಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಪಿಟಿಐ
Published 12 ಆಗಸ್ಟ್ 2024, 11:00 IST
Last Updated 12 ಆಗಸ್ಟ್ 2024, 11:00 IST
<div class="paragraphs"><p>ಭಾರಿ ಮಳೆ ಸುರಿದಿದ್ದರಿಂ ದೆಹಲಿ–ಗುರುಗ್ರಾಮ ಹೆದ್ದಾರಿಯಲ್ಲಿ ನೀರು ನಿಂತಿರುವುದು</p></div>

ಭಾರಿ ಮಳೆ ಸುರಿದಿದ್ದರಿಂ ದೆಹಲಿ–ಗುರುಗ್ರಾಮ ಹೆದ್ದಾರಿಯಲ್ಲಿ ನೀರು ನಿಂತಿರುವುದು

   

– ಪಿಟಿಐ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಭಾಗಗಳಲ್ಲಿ ಸೋಮವಾರ ಬೆಳಿಗ್ಗೆ ಭಾರಿ ಮಳೆಯಾಗಿದ್ದು, ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಕೇಂದ್ರ, ದಕ್ಷಿಣ, ನೈರುತ್ಯ ಹಾಗೂ ಪೂರ್ವ ದೆಹಲಿಯಲ್ಲಿ ಮಳೆ ಸುರಿದಿದೆ. ಕನಿಷ್ಠ ತಾಪಮಾನ 24.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ದೆಹಲಿಯ ವಾಯುಗುಣಮಟ್ಟ ಸೂಚ್ಯಂಕ ಸಮಾಧಾನಕರವಾಗಿದ್ದು, ಬೆಳಿಗ್ಗೆ 9 ಗಂಟೆಗೆ 53ರಷ್ಟಿತ್ತು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ದತ್ತಾಂಶದಿಂದ ಗೊತ್ತಾಗಿದೆ.

ವಾಯು ಗುಣಮಟ್ಟ ಮಾಪನ ಸೂಚ್ಯಂಕದ ಅನುಸಾರ, 0 ಮತ್ತು 50 ರ ನಡುವಿನ ಎಕ್ಯೂಐ ಅನ್ನು ‘ಉತ್ತಮ’, 51 ಮತ್ತು 100 ‘ತೃಪ್ತಿದಾಯಕ’, 101 ಮತ್ತು 200 ‘ಮಧ್ಯಮ’, 201 ಮತ್ತು 300 ‘ಕಳಪೆ’, 301 ಮತ್ತು 400 ‘ಅತಿ ಕಳಪೆ’, ಮತ್ತು 401 ಮತ್ತು 500 ‘ತೀವ್ರ’ ಎಂದು ಪರಿಗಣಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.