ADVERTISEMENT

Delhi Rains | ಕಡಿಮೆಯಾದ ವರುಣನ ಅಬ್ಬರ: ಮಳೆ ಸಂಬಂಧಿತ ಅವಘಡಗಳಲ್ಲಿ 8 ಜನ ಸಾವು

ಪಿಟಿಐ
Published 29 ಜೂನ್ 2024, 3:23 IST
Last Updated 29 ಜೂನ್ 2024, 3:23 IST
<div class="paragraphs"><p>ಮಳೆ ಸಂಬಂಧಿತ ಅವಘಡ</p></div>

ಮಳೆ ಸಂಬಂಧಿತ ಅವಘಡ

   

ನವದೆಹಲಿ: ಇಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದು ಶನಿವಾರ ಬೆಳಗ್ಗೆಯಿಂದ ಮಳೆ ಕಡಿಮೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಬೆಳಗ್ಗೆಯಿಂದ ರಾತ್ರಿವರೆಗೂ ಐವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌–1ರ ಚಾವಣಿಯ ಒಂದು ಭಾಗ ಕುಸಿದಿದ್ದು, ಟ್ಯಾಕ್ಸಿ ಚಾಲಕರೊಬ್ಬರು ಮೃತಪಟ್ಟಿದ್ದಾರೆ. ರೋಹಿಣಿ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ವಿದ್ಯುತ್‌ ತಗುಲಿ ಮೃತಪಟ್ಟರು. ಆರ್‌ಕೆಪುರಂ, ಉಸ್ಮಾನ್‌ ಪುರ, ದ್ವಾರಕದಲ್ಲಿ ಚಾವಣಿ ಹಾಗೂ ಗೋಡೆ ಕುಸಿದು ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಶುಕ್ರವಾರ ರಾತ್ರಿ 12 ಗಂಟೆ ಸುಮಾರಿಗೆ ವಸಂತ ವಿಹಾರ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಗೋಡೆ ಕುಸಿದು, ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಶುಕ್ರವಾರ ಬೆಳಿಗ್ಗೆ ಸುಮಾರು ಮೂರು ಗಂಟೆ ಧಾರಾಕಾರ ಮಳೆ ಸುರಿಯಿತು. ಹಲವು ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರು ಪರದಾಡಿದರು. ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿತು.

ಸಂಸದರಾದ ಶಶಿ ತರೂರ್‌ ಮತ್ತು ಮನೀಷ್‌ ತಿವಾರಿ ಅವರ ಮನೆಗಳಿಗೂ ನೀರು ನುಗ್ಗಿದೆ. ದೆಹಲಿಯ ಲುಟೆನ್ಸ್‌ ಪ್ರದೇಶದಲ್ಲಿರುವ ತಮ್ಮ ಮನೆಯ ಸುತ್ತಲೂ ನೀರು ಆವರಿಸಿರುವ ವಿಡಿಯೊವನ್ನು ಇಬ್ಬರೂ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದ್ದು ಮುಂದಿನ 24 ಗಂಟೆಗಳಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಜಾಗ್ರತೆ ಕ್ರಮವಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.