ನವದೆಹಲಿ: ಈಶಾನ್ಯ ದೆಹಲಿ ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಜೆಎನ್‌ಯು ಹಳೆ ವಿದ್ಯಾರ್ಥಿ ಉಮರ್ ಖಾಲಿದ್ ಅವರನ್ನು ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿದೆಹಲಿ ಪೊಲೀಸರು ಬಂಧಿಸಿದ್ದು, 10 ದಿನಗಳ ವಿಚಾರಣೆಗೆ ಒಳಪಡಿಸಿದ್ದಾರೆ.
ಫೆಬ್ರುವರಿಯಲ್ಲಿ ನಡೆದ ಹಿಂಸಾಚಾರವು ಪೂರ್ವ ನಿರ್ಧಾರಿತ ಪಿತೂರಿಯಾಗಿದ್ದು, ದೇಶದ್ರೋಹ, ಕೊಲೆ ಯತ್ನ, ಧರ್ಮದ ಆಧಾರದಲ್ಲಿ ಗುಂಪುಗಳ ನಡುವೆ ದ್ವೇಷ ಉತ್ತೇಜಿಸಿರುವುದಾಗಿ ಖಾಲಿದ್ ಮತ್ತು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಆರೋಪಿಯಿಂದ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಭಾನುವಾರ ರಾತ್ರಿ ಖಾಲಿದ್ ಅವರನ್ನು ಬಂಧಿಸಲಾಗಿತ್ತು. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಬ್ ರಾವತ್ ವಿಡಿಯೊ ಕಾನ್ಫರೆನ್ಸ್ ಮೂಲಕ ಸೋಮವಾರ ವಿಚಾರಣೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.