ADVERTISEMENT

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಪ್ರವಾಹ ಭೀತಿ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2018, 4:11 IST
Last Updated 26 ಸೆಪ್ಟೆಂಬರ್ 2018, 4:11 IST
   

ನವದೆಹಲಿ: ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಯಮುನಾ ನದಿ ಅಪಾಯಮಟ್ಟದಲ್ಲಿ ಹರಿಯುತ್ತಿರುವುದರಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ಕಳೆದೊಂದು ವಾರದಿಂದ ಯಮುನಾ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹಳೇ ದೆಹಲಿ ಸೇರಿದಂತೆ ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿಎದುರಾಗಿದೆ. ಮುಂಜಾಗ್ರತ ಕ್ರಮವಾಗಿ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

ಪ್ರವಾಹದ ಭೀತಿ ಎದುರಾಗಿರುವುದುರಿಂದ ನದಿಯಿಂದ ಸಾಕಷ್ಟು ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಬುಧವಾರ ಬೆಳಗ್ಗೆ 28,253 ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗಿದೆ.

ADVERTISEMENT

ದೆಹಲಿ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ವಿಪತ್ತು ನಿರ್ವಹಣಾ ತಂಡಗಳು, ಅಗ್ನಿಶಾಮಕ ಸಿಬ್ಬಂದಿಗಳನ್ನು ನದಿ ಪಾತ್ರ ಪ್ರದೇಶಗಳಲ್ಲಿ ನಿಯೋಕನೆ ಮಾಡಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.