ADVERTISEMENT

ದೆಹಲಿ: ವಾಯುಮಾಲಿನ್ಯ ಮತ್ತೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2024, 14:27 IST
Last Updated 27 ಅಕ್ಟೋಬರ್ 2024, 14:27 IST
...
...   

ನವದೆಹಲಿ: ದೆಹಲಿಯಲ್ಲಿ ಭಾನುವಾರ ಗಾಳಿ ಗುಣಮಟ್ಟ ಸೂಚ್ಯಂಕವು 359 ದಾಖಲಾಗುವ ಮೂಲಕ ಮತ್ತೆ ಅತ್ಯಂತ ಕಳಪೆ ವರ್ಗಕ್ಕೆ ಸೇರಿದ್ದು, ವಾಯುಮಾಲಿನ್ಯ ಹೆಚ್ಚಾಗಿದೆ.

ಕಳೆದ ಎರಡು ದಿನಗಳಿಂದ ಸುಧಾರಿಸಿದ್ದ ಗಾಳಿಯ ಗುಣಮಟ್ಟವು ಶನಿವಾರ 255 ಎಕ್ಯೂಐ ಇತ್ತು. ಆದರೆ ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹೆಚ್ಚಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣಾ ಮಂಡಳಿ ತಿಳಿಸಿದೆ.

40 ಮೇಲ್ವಿಚಾರಣಾ ಕೇಂದ್ರಗಳ ಪೈಕಿ 36 ಕೇಂದ್ರಗಳ ಮಾಹಿತಿ ಹಂಚಿಕೊಂಡಿರುವ ಇಲಾಖೆ, 8 ಕೇಂದ್ರಗಳನ್ನು ಹೊರತುಪಡಿಸಿ ಉಳಿದ 28 ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ಬಹಳ ಕಳಪೆಯಾಗಿದೆ ಎಂದು ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.